News Kannada
Sunday, January 29 2023

ಉಡುಪಿ

ಕಾರ್ಕಳ: ಮನೆಯ ಅಡುಗೆ ಕೋಣೆಯ ಬಾಗಿಲು ಮುರಿದು 4.50ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

Rs 4.50 lakh was stolen after breaking open the door of the kitchen of a house. Gold jewellery stolen
Photo Credit : News Kannada

ಕಾರ್ಕಳ: ಮನೆಯ ಅಡುಗೆ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಮನೆಯ ಗೋದ್ರೆಜ್ ನಲ್ಲಿ ಇರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿಕೊಂಡು ಹೋಗಿರುವ ಘಟನೆ ಕಾರ್ಕಳ ತಾಲೂಕು ಕಲ್ಯಾ ಗ್ರಾಮದ ಕಂಗಿತ್ಲು ಡಿ.3ರಂದು ರಾತ್ರಿ ನಡೆದಿದೆ.

ಕಲ್ಯಾ ಗ್ರಾಮದ ಕಂಗಿತ್ಲು ನಿವಾಸಿ ಉಷಾ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ನಿನ್ನೆ ರಾತ್ರಿ ಯಾರೋ ಕಳ್ಳರು ಉಷಾ ಅವರ ಮನೆಯ ಅಡುಗೆ ಕೋಣೆಯ ಬಾಗಿಲಿನ ಬೀಗ ಮುರಿದು ಮನೆಯೊಳಗೆ ಪ್ರವೇಶಿಸಿದ್ದಾರೆ.

ಬಳಿಕ ಮನೆಯ ಕೋಣೆಯಲ್ಲಿದ್ದ ಗೋದ್ರೆಜ್ ನಲ್ಲಿ ಇರಿಸಿದ್ದ ಸುಮಾರು 4.50 ಲಕ್ಷ ರೂ. ಮೌಲ್ಯದ ಸುಮಾರು 156 ಗ್ರಾಂ ತೂಕದ ಬಂಗಾರದ ಒಡವೆಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ರಾಯಚೂರು: ಭಾರತ ಐಕ್ಯತಾ ಯಾತ್ರೆ ನಾಳೆ ಬೆಳಗ್ಗೆ ರಾಜ್ಯದಲ್ಲಿ ಮುಕ್ತಾಯ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು