ಉಡುಪಿ: ಚುನಾವಣೆ ಹತ್ತಿರ ಬಂದಾಗ ಅಭಿವೃದ್ಧಿಕ್ಕಿಂತ ಹೆಚ್ಚಾಗಿ ಅಪಪ್ರಚಾರಗಳೆ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತೇವೆ. ಅಭಿವೃದ್ಧಿ ವಿಷಯಗಳನ್ನು ಇಟ್ಟುಕೊಂಡು ಚುನಾವಣೆ ಎದುರಿಸಲಾಗದ ಕಾಂಗ್ರೆಸ್, ಸರಕಾರ ಹಾಗೂ ಎಲ್ಲ ಶಾಸಕರ ಮೇಲೆ ವೈಯಕ್ತಿಕವಾಗಿ ಅಪ್ರಚಾರ, ಸುಳ್ಳು ಅಪಾದನೆಗಳನ್ನು ದೊಡ್ಡ ಪ್ರಮಾಣದಲ್ಲಿ ಮಾಡುತ್ತಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ನನ್ನನ್ನು ಎದುರಿಸಲು ಆಗಲ್ಲವೆಂದು ಕಾರ್ಕಳದಲ್ಲಿ ಸುನಿಲ್ ಕುಮಾರ್ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದ್ರು. ಅದನ್ನು ಯಾರು ಹೇಳಿದ್ದು. ನಾನು ಹೇಳಿಲ್ಲ, ನಮ್ಮ ಪಕ್ಷದ ಕಾರ್ಯಕರ್ತರು ಹೇಳಿಲ್ಲ. ವಿರೋಧ ಪಕ್ಷ ಕಾಂಗ್ರೆಸ್ ಹೇಳುತ್ತಿದೆ. ನಾನು ಸ್ಪಷ್ಟವಾಗಿ ಹೇಳುತ್ತೇನೆ. ನನಗೆ ಪಕ್ಷ ಕಾರ್ಕಳದಲ್ಲೆ ಸ್ಪರ್ಧಿಸಲು ಅವಕಾಶ ಮಾಡಿಕೊಡಬೇಕು. ನಾನು ಕಾರ್ಕಳದಿಂದಲೆ ಸ್ಪರ್ಧಿಸಲು ಇಚ್ಛೆ ವ್ಯಕ್ತಪಡಿಸುತ್ತೇನೆ ಎಂದರು.