News Kannada
Monday, February 06 2023

ಉಡುಪಿ

ಉಡುಪಿ: ಕೆಮ್ತೂರಿನಲ್ಲಿ ಯುವಕನ ಆತ್ಮಹತ್ಯೆ, ಕಾರಣ ನಿಗೂಢ

Journalist's son shot dead in Uttar Pradesh
Photo Credit : Pixabay

ಉಡುಪಿ: ಯುವಕನೊರ್ವ ಮನೆಯ ಮಾಡಿನ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಮ್ತೂರು ವಿಷ್ಣುಮೂರ್ತಿ ದೇವಸ್ಥಾನದ ಬಳಿ ಸೋಮವಾರ ನಡೆದಿದೆ.

ಕೆಮ್ತೂರು ನಿವಾಸಿ 34ವರ್ಷದ ಅಶೋಕ್ ನಾಯ್ಕ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಮನೆಯ ಮಾಡಿನ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಯವರು‌ ಕೂಡಲೇ ನೇಣಿನ ಕುಣಿಕೆಯಿಂದ ಇಳಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು‌ ಯುವಕನನ್ನು ಅಜ್ಜರಕಾಡು ಜಿಲ್ಲಾ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲು ಸಹಕರಿಸಿದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಯುವಕ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

See also  ಎಸ್‌ಡಿಎಂ ʼಮನೀಷಾʼಗೆ ಮಂಗಳೂರು ವಿವಿಯಿಂದ ಅತ್ಯುತ್ತಮ ಕಾಲೇಜು ಸಂಚಿಕೆ ಮನ್ನಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು