News Kannada
Monday, January 30 2023

ಉಡುಪಿ

ಉಡುಪಿ: ಮೆದುಳು ಜ್ವರ ತಡೆಗೆ ಜೆ.ಇ ಲಸಿಕೆ ಅಗತ್ಯ- ಜಿಲ್ಲಾಧಿಕಾರಿ ಕೂರ್ಮಾರಾವ್

Udupi: Je vaccine is necessary to prevent encephalitis: Deputy Commissioner Koorma Rao
Photo Credit : News Kannada

ಉಡುಪಿ: ಜಿಲ್ಲೆಯಲ್ಲಿನ 1 ರಿಂದ 15 ವರ್ಷದೊಳಗಿನ ಮಕ್ಕಳಲ್ಲಿ ಮೆದುಳು ಜ್ವರ ಬಾರದಂತೆ ತಡೆಯಲು ಜೆ.ಇ. ಲಸಿಕೆ ಪಡೆಯುವುದು ಅಗತ್ಯವಿದ್ದು, ಪೋಷಕರು ತಮ್ಮ ಮಕ್ಕಳಿಗೆ ಈ ಲಸಿಕೆಯನ್ನು ಪಡೆಯಲು ಪ್ರೇರೇಪಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು.

ಅವರು ನಗರದ ಬೋರ್ಡ್ ಹೈಸ್ಕೂಲ್‌ನಲ್ಲಿ ನಡೆದ, ಮೆದುಳು ಜ್ವರ ಲಸಿಕಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರೋಗಗಳು ಬಂದಾಗ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬಾರದಂತೆ ಅಗತ್ಯ ಲಸಿಕೆಗಳನ್ನು ಪಡೆಯುವ ಮೂಲಕ ಮುನ್ನೆಚ್ಚರಿಕೆ ವಹಿಸಬೇಕು. ಮೆದುಳು ಜ್ವರವು 1 ರಿಂದ 15 ವರ್ಷದೊಳಗಿನ ಮಕ್ಕಳನ್ನು ಭಾಧಿಸುವುದರಿಂದ ಮಕ್ಕಳಲ್ಲಿ, ನರ ದೌರ್ಬಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಹಾಗೂ ಮರಣ ಸಂಭವಿಸುವ ಸಾಧ್ಯತೆಗಳಿರುವುದರಿಂದ ಮುನ್ನೆಚ್ಚರಿಕೆಯಾಗಿ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆಯನ್ನು ಕೊಡಿಸಬೇಕು ಹಾಗೂ ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡ ಪರಿಣಾಮಗಳು ಇಲ್ಲ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮರಾವ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು, ಜಿಲ್ಲಾಸ್ಪತ್ರೆಯ ವೈದ್ಯೆ ಡಾ.ವೀಣಾ, ವಿಶ್ವ ಆರೋಗ್ಯ ಸಂಸ್ಥೆ ಪ್ರತಿನಿಧಿ ಡಾ.ಕೀರ್ತಿನಾಥ್ ಬಲ್ಲಾಳ್ ಉಪಸ್ಥಿತರಿದ್ದರು.

See also  ಶಿರ್ವ: ಬೈಕಿನಿಂದ ಬಿದ್ದು ಮಹಿಳೆ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು