ಉಪ್ಪೂರು: ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದಲ್ಲಿ ಡಿ.5ರಂದು ಸಂಜೆ ನಡೆದಿದೆ.
ಉಪ್ಪೂರು ನಿವಾಸಿ ಯಲ್ಲಪ್ಪ ಡೊಂಬರ ಎಂಬವರ ಮಗ 22ವರ್ಷದ ವಿಜಯ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಕಳೆದ ಡಿಸೆಂಬರ್ ನಲ್ಲಿ ಬೈಕ್ ನಲಿ ಸ್ಕಿಡ್ ಆಗಿ ಬಿದ್ದು ಚಿಕಿತ್ಸೆಯನ್ನು ಪಡೆದು ಮನೆಯಲ್ಲಿದ್ದನು. ಸರಿಯಾಗಿ ಕೆಲಸಕ್ಕೆ ಹೋಗದೆ, ವಿಪರೀತ ಕುಡಿತ ಚಟ ಬೆಳೆಸಿಕೊಂಡಿದ್ದನು. ಇದೇ ಕಾರಣದಿಂದ ಜೀವನದಲಿ ಜಿಗುಪ್ಸೆಗೊಂಡು ನಿನ್ನೆ ಸಂಜೆ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ಮಾಡಿನ ಮರದ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಹಾಯವಾಣಿಗೆ ಕರೆ ಮಾಡಿ:
ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು