ಉಡುಪಿ: ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಗುರುವಾರ ಜಿಲ್ಲಾ ಕಚೇರಿಯ ಬಳಿ ಕಾರ್ಯಕರ್ತರು ಸಿಹಿತಿಂಡಿ ಹಂಚಿ ಸಂಭ್ರಮಾಚರಣೆ ನಡೆಸಿದರು.
ಬಳಿಕ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಗುಜರಾತ್ ವಿಧಾನಸಭೆ ಫಲಿತಾಂಶ ಮುಂದಿನ ಕರ್ನಾಟಕದ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಗುಜರಾತ್ ಹಾಗೂ ಕರ್ನಾಟಕ ಅಭಿವೃದ್ಧಿ, ಹಿಂದುತ್ವ ಮುಂತಾದ ವಿಚಾರಗಳಲ್ಲಿ ಸ್ವಾಮ್ಯತೆಯನ್ನು ಹೊಂದಿದೆ. ಈ ಹಿನ್ನಲೆಯಲ್ಲಿ ಜನಾಭಿಪ್ರಾಯದಂತೆ ಕರ್ನಾಟಕದಲ್ಲೂ ಬಿಜೆಪಿ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಭರ್ಜರಿ ವಿಜಯ ದಾಖಲಿಸಲಿದೆ ಎಂದು ಭವಿಷ್ಯ ನುಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಎಮ್. ಸುವರ್ಣ, ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ಪ್ರಕೋಷ್ಠಗಳ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿಪ್ರಸಾದ್ ಶೆಟ್ಟಿ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಸಲೀಂ ಅಂಬಾಗಿಲು, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಷ್ಮಿತಾ ಬಿ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.