ಉಡುಪಿ: ನಗರದಲ್ಲಿ ವ್ಯವಸ್ಥಿತ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದರಿಂದ ದಿನೇ ದಿನೇ ಸಂಚಾರ ದಟ್ಟನೆ ಹೆಚ್ಚುತ್ತಿದೆ. ಇದರ ಜೊತೆಗೆ ಟ್ರಾಫಿಕ್ ನಿಯಮಾವಳಿ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಲೇ ಇವೆ.
ಟ್ರಾಫಿಕ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ 2022ರ ಜನವರಿಯಿಂದ ನವೆಂಬರ್ ಅಂತ್ಯದವರೆಗೆ 63,85,100 ರೂ. ದಂಡ ಸಂಗ್ರಹ ಮಾಡಲಾಗಿದೆ.
ನಗರದ ಸಿಟಿ ಬಸ್ ನಿಲ್ದಾಣ, ಕೆಎಂ ಮಾರ್ಗ, ತ್ರಿವೇಣಿ ಸರ್ಕಲ್, ನಗರಸಭೆಯ ಎದುರುಗಡೆ, ಶಿರಿಬೀಡು, ಆಭರಣ ರಸ್ತೆ ಮೊದಲಾದ ಪ್ರದೇಶಗಳಲ್ಲಿ ಟ್ರಾಫಿಕ್ ದಟ್ಟಣೆ ಹೆಚ್ಚಾಗಿ ಕಂಡುಬರುತ್ತಿವೆ.
ಕೆಲವೆಡೆ ಈಗಾಗಲೇ ಪಾರ್ಕಿಂಗ್ ಇದೆ. ಪಾರ್ಕಿಂಗ್ ಇಲ್ಲದ ಕಡೆಗಳಲ್ಲಿ ವಾಹನ ಪಾರ್ಕ್ ಮಾಡಿದ ಸವಾರರಿಗೆ ಪೊಲೀಸರು ದಂಡದ ಬಿಸಿ ಮುಟ್ಟಿಸುತ್ತಿದ್ದಾರೆ.