News Kannada
Tuesday, February 07 2023

ಉಡುಪಿ

ಹಿರಿಯಡ್ಕ: ಒತ್ತಿನೆಣೆ ಪ್ರಕರಣದ ಪ್ರಮುಖ‌ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ

Hiriyadka: The main accused in the Case committed suicide in jail.
Photo Credit : News Kannada

ಹಿರಿಯಡ್ಕ: ವಿಚಾರಾಣಾಧೀನ ಕೈದಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡ್ಕದ ಸಮೀಪದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಭಾನುವಾರ ಮುಂಜಾನೆ ನಡೆದಿದೆ.

ಕಾರ್ಕಳ ತಾಲೂಕಿನ ಮಾಳ ಗ್ರಾಮದ ಪೇರಡ್ಕ ನಿವಾಸಿ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ಕೈದಿ. ಈತನು ಇತರೆ ಮೂವರೊಂದಿಗೆ ಸೇರಿಕೊಂಡು ಕಾರ್ಕಳದ ಆನಂದ ದೇವಾಡಿಗ ಎಂಬಾತನನ್ನು ಬೈಂದೂರು ತಾಲೂಕಿನ ಒತ್ತಿನೆಣೆ ಹೇನ್ ಬೇರು ಬಳಿ ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಸಜೀವವಾಗಿ ಸುಟ್ಟು ಹತ್ಯೆಗೈದಿದ್ದರು. ಪ್ರಕರಣವೊಂದರಲ್ಲಿ ತಪ್ಪಿಸಿಕೊಳ್ಳುವ ಉದ್ದೇಶದಿಂದ ಈ ಕೃತ್ಯ ಎಸಗಿದ್ದರು. ಆದರೆ ಆ ಬಳಿಕ ಪೊಲೀಸರಿಗೆ ಸಿಕ್ಕಿಬಿದ್ದ ಸದಾನಂದ ಸೇರಿಗಾರ್ ಹಾಗೂ ಆತನ ಗೆಳತಿ ಶಿಲ್ಪ ಸಾಲಿಯಾನ್, ಸತೀಶ್ ದೇವಾಡಿಗ, ನಿತೀಶ್ ದೇವಾಡಿಗ ಜೈಲು ಪಾಲಾಗಿದ್ದರು.

ಜೈಲು ಸೇರಿದ ಬಳಿಕ ಸದಾನಂದ ಸೇರಿಗಾರ್ ಬಹಳಷ್ಟು ಮಾನಸಿಕ‌ ಖಿನ್ನತೆಗೆ ಒಳಗಾಗಿದ್ದನು. ಇದೇ ಕಾರಣದಿಂದ ಇಂದು ಮುಂಜಾನೆ 5 ಗಂಟೆಯ ಸುಮಾರಿಗೆ ಪಂಚೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನು ಗಮನಿಸಿದ ಇತರ ಕೈದಿಗಳು ಆತನನ್ನು ನೇಣಿನ ಕುಣಿಕೆಯಿಂದ ಬಿಡಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ದಾರಿ ಮಧ್ಯೆ ಸದಾನಂದ ಸೇರಿಗಾರ್ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.

ಮೃತದೇಹವನ್ನು ಅಜ್ಜರಕಾಡು ಶವಗಾರದಲ್ಲಿ ಇರಿಸಲಾಗಿದ್ದು, ಸ್ಥಳದಲ್ಲಿ ಹೆಚ್ಚುವರಿ ಎಸ್ಪಿ ಎಸ್‌.ಟಿ ಸಿದ್ದಲಿಂಗಪ್ಪ, ಉಡುಪಿ ಡಿವೈಎಸ್ಪಿ ಸುಧಾಕರ್ ನಾಯ್ಕ್ ಮತ್ತು ಸಿಬ್ಬಂದಿಗಳು ಮೊಕ್ಕಾಂ ಹೂಡಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.

See also  ಮಡಿಕೇರಿ: ಹಾಡುಗಳ ಮೂಲಕ ಪತ್ರಕರ್ತರಿಂದ ಪುನೀತ್ ರಾಜ್ ಸ್ಮರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು