News Kannada
Wednesday, February 01 2023

ಉಡುಪಿ

ಉಡುಪಿ: ಇಂದ್ರಾಳಿಯಲ್ಲಿ ಮನೆಗೆ ನುಗ್ಗಿ ನಗರಸಭೆಯ ಮಾಜಿ ಅಧ್ಯಕ್ಷೆಯ ಪತಿಗೆ ಮಾರಣಾಂತಿಕ ಹಲ್ಲೆ

Udupi: Husband of former cmc president brutally assaulted after he barged into his house in Indrali
Photo Credit : News Kannada

ಉಡುಪಿ: ಮನೆಯೊಂದಕ್ಕೆ ನುಗ್ಗಿದ ಯುವಕನೋರ್ವ ನಗರಸಭೆಯ ಮಾಜಿ ಅಧ್ಯಕ್ಷೆಯ ಪತಿಗೆ ಕಬ್ಬಿಣದ ಸಾಲಕೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಇಂದ್ರಾಳಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷೆ ಶಾಂತಾ ನಾಯಕ್ ಅವರ ಪತಿ 54ವರ್ಷದ ಕೃಷ್ಣ ನಾಯಕ್ ಎಂಬವರು ಹಲ್ಲೆಗೊಳಗಾದ ವ್ಯಕ್ತಿ. ನೆರೆಮನೆಯ ನಿವಾಸಿ 23ವರ್ಷದ ಅರ್ಜುನ್ ಹಲ್ಲೆಗೈದ ಆರೋಪಿ. ಕೃಷ್ಣ ಎಂಬಾವರು ಗುರಾಯಿಸಿ ನೋಡಿದರೆಂಬ ಕಾರಣಕ್ಕೆ ಆರೋಪಿ ಅರ್ಜುನ್ ಈ ಕೃತ್ಯ ನಡೆಸಿದ್ದಾನೆ ಎನ್ನಲಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಕೃಷ್ಣ ಅವರನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಭೇಟಿ ನೀಡಿದ ಮಣಿಪಾಲ ಠಾಣೆಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

See also  ಮೈಸೂರು: ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಸಾಲುಮರದ ತಿಮ್ಮಕ್ಕ ಅವರಿಗೆ ಸನ್ಮಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು