News Kannada
Wednesday, October 04 2023
ಉಡುಪಿ

ಡಿ.18ರಂದು ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ರಜತ ಸಂಭ್ರಮ ಸಮಾರಂಭ

Silver Jubilee celebrations of Catholic Credit Co-operative Society on December 18
Photo Credit : News Kannada

ಉಡುಪಿ: ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ರಜತ ಸಂಭ್ರಮ ಸಮಾರಂಭವು ಡಿ.18 ರಂದು ಬೆಳಿಗ್ಗೆ 10.30 ಕ್ಕೆ ಉಡುಪಿಯ ಶೋಕ ಮಾತಾ ಇಗರ್ಜಿ ಚರ್ಚ್ ನ ಆವೆ ಮರಿಯಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಸೊಸೈಟಿಯ ಅಧ್ಯಕ್ಷ ಅಲೋಷಿಯಸ್ ಡಿ’ಅಲ್ಮೇಡಾ ಅವರು ತಿಳಿಸಿದ್ದಾರೆ.

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಶಾಸಕ ರಘುಪತಿ ಭಟ್ ಉದ್ಘಾಟಿಸಲಿದ್ದಾರೆ. ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಆಲೋಷಿಯಸ್ ಡಿ’ಅಲ್ಮೇಡಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೋ ಅವರು ಆಶಿರ್ವಚನ ನೀಡಲಿದ್ದಾರೆ ಎಂದರು.

ಮಿಲಾಗ್ರಿಸ್ ಕೆಥೆಡ್ರಲ್ ಕಲ್ಯಾಣಪುರ ಚರ್ಚ್ ನ ವಲೇರಿಯನ್ ಮೆಂಡೋನ್ಸಾ, ಉಡುಪಿ ಶೋಕಮಾತಾ ಇಗರ್ಜಿ ಚರ್ಚ್‍ನ ಧರ್ಮಗುರು ಚಾರ್ಲ್ಸ್ ಮಿನೇಜಸ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಲೂವಿಸ್ ಲೋಬೋ, ಪ್ರಧಾನ ವ್ಯವಸ್ಥಾಪಕ ಸಂದೀಪ್ ಎ. ಫೆರ್ನಾಂಡಿಸ್ , ಫೆಲಿಕ್ಸ್ ಪಿಂಟೋ, ಇಗ್ನೇಷಿಯಸ್ ಮೊನಿಸ್ ಉಪಸ್ಥಿತರಿದ್ದರು.

See also  ದ್ವೇಷ ರಾಜಕೀಯ ದಿಂದ ಮಸೀದಿಯ ಜಾಗದಲ್ಲಿ ಇದ್ದ ಕಟ್ಟಡ ನೆಲಸಮ: SDPI ಆರೋಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು