News Kannada
Saturday, February 04 2023

ಉಡುಪಿ

ಮಣಿಪಾಲ: ಡಿ.24ರಂದು “ಅಟಲ್ ಉತ್ಸವ” ರಾಷ್ಟ್ರಮಟ್ಟದ ಹೊನಲು‌ ಬೆಳಕಿನ ಪ್ರೊ ಕಬಡ್ಡಿ ಪಂದ್ಯಕೂಟ

Photo Credit : News Kannada

ಮಣಿಪಾಲ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನಾಚರಣೆಯ ಅಂಗವಾಗಿ ಬಿಜೆಪಿ ಉಡುಪಿ ನಗರ ಹಾಗೂ ಗ್ರಾಮಾಂತರ ವತಿಯಿಂದ ಡಿ. 24ರಂದು ಸಂಜೆ 5ಗಂಟೆಗೆ “ಅಟಲ್ ಉತ್ಸವ” ರಾಷ್ಟ್ರಮಟ್ಟದ ಹೊನಲು‌ ಬೆಳಕಿನ ಪ್ರೊ ಕಬಡ್ಡಿ ಪಂದ್ಯಕೂಟ ಹಾಗೂ ಡಿ. 25ರಂದು ಸಂಜೆ 4ಗಂಟೆಗೆ ಬೂತ್ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಎರಡು ಕಾರ್ಯಕ್ರಮಗಳು ಉಡುಪಿ ಎಂಜಿಎಂ ಮೈದಾನದಲ್ಲಿ ನಡೆಯಲಿದೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದರು.

ಮಣಿಪಾಲದ ಕಂಟ್ರಿ ಇನ್ ಹೋಟೆಲ್ ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಯುವಜನ, ಕ್ರೀಡೆ ಹಾಗೂ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಕಬಡ್ಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕ್ರೀಡೆ ಮತ್ತು ಯುವ ಜನಸಬಲೀಕರಣ ಸಚಿವ ಡಾ.ಕೆ ಸಿ ನಾರಾಯಣ ಗೌಡ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ ಎಂದರು.

ಈ ಪಂದ್ಯಾವಳಿಯಲ್ಲಿ ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಾದ ದೆಹಲಿ, ಹರಿಯಾಣ, ತಮಿಳುನಾಡು, ಮಹಾರಾಷ್ಟ್ರ, ಕೇರಳ ರಾಜ್ಯಗಳ ಒಟ್ಟು 12 ತಂಡಗಳು ಭಾಗವಹಿಸಲಿದ್ದು, ಪ್ರಥಮ, ದ್ವಿತೀಯ, ತೃತೀಯ ಹಾಗೂ ನಾಲ್ಕನೇ ಸ್ಥಾನಗಳ ವಿಜೇತರಿಗೆ ಅನುಕ್ರಮವಾಗಿ 1 ಲಕ್ಷ, 75 ಸಾವಿರ, 50 ಸಾವಿರ, ಹಾಗೂ 25 ಸಾವಿರ ರೂ. ನಗದು ಬಹುಮಾನ, ಪ್ರಶಸ್ತಿ ಫಲಕಗಳನ್ನು ವಿತರಿಸಲಾಗುವುದು. ಈ ಪಂದ್ಯಾಟವನ್ನು ವೀಕ್ಷಿಸಲು ಸುಮಾರು 10 ರಿಂದ 15 ಸಾವಿರ ವೀಕ್ಷಕರು ಆಗಮಿಸುವ ನಿರೀಕ್ಷೆ ಇದ್ದು ಅದಕ್ಕೆ ಪೂರಕವಾದ ಗ್ಯಾಲರಿ ಮತ್ತು ಅಸನಗಳ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ತಿಳಿಸಿದರು.

ಡಿ. 25ರಂದು ನಡೆಯುವ ಬೂತ್ ಸಂಗಮ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.  ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

See also  ಉಡುಪಿ: ವೇದಗಳ ಕಾಲದಲ್ಲೂ ಪ್ರಜಾಪ್ರಭುತ್ವ ಇತ್ತು ಎಂಬ ಕೇಂದ್ರ ಸರ್ಕಾರದ ಸುತ್ತೋಲೆಗೆ ಖಂಡನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು