ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ಮೂವರು ಕಾಲೇಜು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಣಿಪಾಲ ವಿದ್ಯಾರತ್ನ ನಗರದಲ್ಲಿ ನಡೆದಿದೆ.
ಖಾಸಗಿ ಕಾಲೇಜು ವಿದ್ಯಾರ್ಥಿಗಳಾದ ಅಭಿನಂದ್ ಎ.ಎಸ್, ಸಿದ್ದಾರ್ಥ್ ವಿ. ಹಾಗೂ ಸಾರ್ಥಕ್ ಸಿಂಗ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಮೂವರು ವಿದ್ಯಾರತ್ನ ನಗರದ ಪರಿಸರದಲ್ಲಿ ಮಾದಕ ವಸ್ತು ಸೇವಿಸಿದಂತೆ ಕಂಡುಬಂದಿದ್ದು, ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.
ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಮೂವರು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ.