News Kannada
Sunday, January 29 2023

ಕ್ರೀಡೆ

ಕರ್ನಾಟಕದ 8 ಜಿಲ್ಲೆಗಳಿಗೆ ಕ್ರೀಡಾ ವಿಜ್ಞಾನ ಕೇಂದ್ರ ತೆರೆಯಲು ಅನುಮತಿ:  ಸಚಿವ ಅನುರಾಗ್ ಠಾಕೂರ್

Photo Credit : News Kannada

ಉಡುಪಿ: ಕರ್ನಾಟಕದಲ್ಲಿ 8 ಜಿಲ್ಲೆಗಳಿಗೆ ಒಂದರಂತೆ ಕ್ರೀಡಾ ವಿಜ್ಞಾನ ಕೇಂದ್ರ ತೆರೆಯಲು ಅನುಮತಿ ನೀಡಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದರು.

ಉಡುಪಿ ಜಿಲ್ಲಾಡಳಿತ, ಜಿಪಂ‌ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆರಂಭಿಸಿರುವ ವಿಜ್ಞಾನ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ಸರ್ಕಾರ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಎಲ್ಲಾ ರೀತಿಯ ಅಗತ್ಯ ನೆರವು ನೀಡಲಾಗುವುದು ಎಂದು ಹೇಳಿದರು.

ದೇಶದಲ್ಲಿ ವಿಶ್ವದ ಅತ್ಯತ್ತಮ ಕ್ರೀಡಾಪಟುಗಳು ರೂಪುಗೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ವ್ಯಜ್ಞಾನಿಕ ತರಬೇತಿ ನೀಡಲಾಗುತ್ತಿದ್ದು ,ಇದಕ್ಕಾಗಿ ಪತಿಭಾವಂತ ಕ್ರೀಡಾಪಟುಗಳ ಆಯ್ಕೆ ಮಾಡಲಾಗುತ್ತಿದ್ದು, ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರ ಕ್ಕೆ ಹಿಂದೆಗಿಂತಲು ಅತಿ ಹೆಚ್ಜಿನ ಹಣ ಮೀಸಲಿರಿಸಲಾಗಿದೆ ಎಂದರು.

ಉಡುಪಿಯಲ್ಲಿ ಎಫ್.ಎಂ. ಕೇಂದ್ರ ಆರಂಭ ಕುರಿತು ಪರಿಶೀಲಿಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ರಾಜ್ಯದ ರೇಷ್ಮೆ ಕೃಷಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ಕೆ.ಸಿ ನಾರಾಯಣ ಗೌಡ,, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಕೆ. ರಘುಪತಿ ಭಟ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಉಪಸ್ಥಿತರಿದ್ದರು.

See also  ಇಂಗ್ಲೆಂಡ್ ತಂಡದೊಂದಿಗೆ ಸ್ಟೋಕ್ಸ್ ಆಸ್ಟ್ರೇಲಿಯಾ ಪ್ರಯಾಣಿಸಲ್ಲ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು