News Kannada
Monday, February 06 2023

ಉಡುಪಿ

ಉಡುಪಿ: ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ತಿಳಿದಿರಬೇಕು – ನ್ಯಾಯಾಧೀಶೆ ಶರ್ಮಿಳಾ

Consumers should be aware of their rights: Justice Sharmila
Photo Credit : News Kannada

ಉಡುಪಿ: ಮಾರುಕಟ್ಟೆಯಲ್ಲಿ ಗ್ರಾಹಕನೇ ಸಾರ್ವಭೌಮನಾಗಿದ್ದು, ಸರಕು ಮತ್ತು ಸೇವೆಗಳನ್ನು ಖರೀದಿಸುವಾಗ ಗ್ರಾಹಕರು ತಮ್ಮ ಹಕ್ಕುಗಳು ಮತ್ತು ಜವಾಬ್ದಾರಿಗಳ ಬಗ್ಗೆ ತಿಳಿದಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್ ಹೇಳಿದರು.

ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾರಾಟಗಾರರು ಕಳಪೆ ವಸ್ತುಗಳನ್ನು ಮೋಸದಿಂದ ಗ್ರಾಹಕರಿಗೆ ಮಾರಿದ್ದಲ್ಲಿ ಅಂತಹ ಮಾರಾಟಗಾರರಿಂದ ಸೂಕ್ತ ಪರಿಹಾರ ಪಡೆಯುವ ಹಕ್ಕುಗಳನ್ನು ಗ್ರಾಹಕರು ಹೊಂದಿದ್ದು, ಉಡುಪಿ ಜಿಲ್ಲೆಯಲ್ಲಿ ಗ್ರಾಹಕರ ವ್ಯಾಜ್ಯಗಳ ಪ್ರಕರಣಗಳು ತ್ವರಿತವಾಗಿ ವಿಲೇವಾರಿ ಆಗುತ್ತಿವೆ ಎಂದರು.

ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲೆ ಡಾ.ನಿರ್ಮಲಾ ಕುಮಾರಿ ಕಾರ್ಯಕ್ರಮ ಉದ್ಘಾಟಿಸಿ, ಪ್ರತಿಯೊಬ್ಬ ಸಾರ್ವಜನಿಕರೂ ಒಂದಲ್ಲ ಒಂದು ರೀತಿಯಲ್ಲಿ ಗ್ರಾಹಕರೇ ಆಗಿದ್ದು, ತಮ್ಮ ಹಕ್ಕುಗಳ ಬಗ್ಗೆ ಮಾಹಿತಿ ಮತ್ತು ಜಾಗೃತಿ ಹೊಂದಿರಬೇಕು ಎಂದರು.
ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ.ರಘುನಾಥ್ ಅಧ್ಯಕ್ಷತೆ ವಹಿಸಿದ್ದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಮಹಮದ್ ಇಸಾಕ್, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿರ್ದೇಶಕ ಗಜೇಂದ್ರ ಉಪಸ್ಥಿತರಿದ್ದರು. ಬಳಕೆದಾರರ ವೇದಿಕೆಯ ಸಂಚಾಲಕ ಎ.ಪಿ.ಕೊಡಂಚ ಉಪನ್ಯಾಸ ನೀಡಿದರು. ಸಹ ಸಂಚಾಲಕ ಪ್ರೊ.ಕೆ.ನಾರಾಯಣನ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿಶ್ವಸ್ಥರಾದ ಹರಿಕೃಷ್ಣ ಶಿವತ್ತಾಯ ಸ್ವಾಗತಿಸಿ, ಲಕ್ಷ್ಮೀಬಾಯಿ ನಿರೂಪಿಸಿದರುಮ. ವಾದಿರಾಜಾಚಾರ್ಯ ವಂದಿಸಿದರು.

See also  ನವದೆಹಲಿ: ಮೋದಿ ಅಧಿಕಾರಾವಧಿಯಲ್ಲಿ ಭಯೋತ್ಪಾದನೆ, ತೀವ್ರಗಾಮಿ ಚಟುವಟಿಕೆಗಳು ಕಡಿಮೆಯಾಗುತ್ತಿವೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು