News Kannada
Tuesday, February 07 2023

ಉಡುಪಿ

ಕುಂದಾಪುರ: ಚಲಿಸುತ್ತಿದ್ದ ಬೈಕ್ ಗೆ ಕ್ರೇನ್ ಡಿಕ್ಕಿ, ಸಹಸವಾರ ಸ್ಥಳದಲ್ಲೇ ಮೃತ್ಯು

Photo Credit : News Kannada

ಕುಂದಾಪುರ: ಚಲಿಸುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಕ್ರೇನ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸಹಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಪಾನಕದಕಟ್ಟೆಯ ಶ್ರೀನಿವಾಸ  ಕಾಂಪ್ಲೆಕ್ಸ್‌ ಬಳಿ ಡಿ.26ರಂದು ಮಧ್ಯಾಹ್ನ 3.15ಕ್ಕೆ‌ ನಡೆದಿದೆ.

ಮೃತನನ್ನು ಸ್ಥಳೀಯ ನಿವಾಸಿ ಪ್ರಶಾಂತ  ಮೊಗವೀರ ಎಂದು ಗುರುತಿಸಲಾಗಿದೆ. ಮೃತ ಪ್ರಶಾಂತ್ ಅವರು ದಿನೇಶ್ ಪೂಜಾರಿ ಎಂಬವರ ಬೈಕ್ ನ ಹಿಂಬದಿಯಲ್ಲಿ ಕುಳಿತುಕೊಂಡು ಕುಂದಾಪುರ ಕಡೆಯಿಂದ ಸಿದ್ದಾಪುರ ಕಡೆಗೆ ತೆರಳುತ್ತಿದ್ದರು.

ಈ ವೇಳೆ ಅದೇ ದಿಕ್ಕಿನಲ್ಲಿ ಅಪರಿಚಿತ ಚಾಲಕನೋರ್ವ ನೋಂದಣಿ ಸಂಖ್ಯೆ ಇಲ್ಲದ ಹೊಸ ಕ್ರೇನ್ ಅನ್ನು ಅತೀವೇಗ ಹಾಗೂ ನಿರ್ಲಕ್ಷ್ಯತನದಿಂದ ಚಾಲನೆ  ಮಾಡಿಕೊಂಡು ಬಂದು, ಪ್ರಶಾಂತ್ ಸಹ ಸವಾರನಾಗಿ ಪ್ರಯಾಣಿಸುತ್ತಿದ್ದ ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ.

ಇದರ ಪರಿಣಾಮ ಬೈಕ್ ಸಮೇತ ಇಬ್ಬರು ಸವಾರರು ರಸ್ತೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೆ ಉಸಿರು ಚೆಲ್ಲಿದ್ದಾರೆ. ಸವಾರ ದಿನೇಶ್ ಪೂಜಾರಿ ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಯಾದಿಂದ ಪಾರಾಗಿದ್ದು, ಚಿನ್ಮಯಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ರೇನ್ ಅನ್ನು ಸ್ಥಳದಲ್ಲೆ ನಿಲ್ಲಿಸಿದ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಬೆಳ್ತಂಗಡಿ: ಆಧುನಿಕ ಕಥನ ಸಾಹಿತ್ಯ ಅಧ್ಯಯನ ಶಿಬಿರ ಉದ್ಘಾಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು