News Kannada
Tuesday, January 31 2023

ಉಡುಪಿ

ಉಡುಪಿ: ಕಮಲಾಕ್ಷಿ ಸೊಸೈಟಿ ನೂರಾರು ಕೋಟಿ ವಂಚನೆ ಪ್ರಕರಣ, ಆರೋಪಿಗೆ ಜ.11ರ ವರೆಗೆ ನ್ಯಾಯಾಂಗ ಬಂಧನ

Udupi: Kamalakshi Society fraud case: Accused sent to judicial custody till January 11
Photo Credit : News Kannada

ಉಡುಪಿ: ಠೇವಣಿದಾರರಿಗೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಉಡುಪಿಯ ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಬಿ.ವಿ.ಲಕ್ಷ್ಮೀನಾರಾಯಣ ಉಪಾಧ್ಯಾಯ ಎಂಬಾತನಿಗೆ 14 ದಿನಗಳ ಕಾಲ ಜ.11ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಇಂದು ಆದೇಶ ನೀಡಿದೆ.

ಬಿ.ವಿ. ಲಕ್ಷ್ಮೀನಾರಾಯಣ ಉಪಾಧ್ಯಾಯ ಠೇವಣಿದಾರರಿಗೆ ನೂರಾರು ಕೋಟಿ ರೂಪಾಯಿ ವಂಚಿಸಿ ತಲೆಮರೆಸಿಕೊಂಡಿದ್ದನು. ಈ ಕುರಿತಂತೆ ಕೆಲವು ಠೇವಣಿದಾರರು ಲಕ್ಷ್ಮೀನಾರಾಯಣ ವಿರುದ್ಧ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ವಂಚನೆ ಕೇಸ್ ದಾಖಲಿಸಿದ್ದರು. ಅದರಂತೆ ತನಿಖೆಗೆ ಇಳಿದ ಸೆನ್ ಪೊಲೀಸರು ಬ್ರಹ್ಮಾವರ ಮಟಪಾಡಿಯಲ್ಲಿ ಆರೋಪಿ ಲಕ್ಷ್ಮೀನಾರಾಯಣನನ್ನು ಬುಧವಾರ ಬಂಧಿಸಿದ್ದರು. ಇಂದು ಆರೋಪಿಯನ್ನು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು, ಕಿರಿಯ ವಿಭಾಗ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ಮುಂದೆ ಪೊಲೀಸರು ಹಾಜರುಪಡಿಸಿದ್ದರು.

ಆರೋಪಿ ತನ್ನ ವಕೀಲರ ಮೂಲಕ ಈಗಾಗಾಲೇ ಜಾಮೀನು ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಜ.2ಕ್ಕೆ ನಡೆಯಲಿದೆ ಎಂದು ತಿಳಿದುಬಂದಿದೆ.

See also  ಕಾಸರಗೋಡು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ 2024 ರ ಮೇ ತಿಂಗಳೊಳಗೆ ಪೂರ್ಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು