ಕುಂದಾಪುರ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡು ಘಟನೆ ಕುಂದಾಪುರ ತಾಲೂಕಿನ ಆಲೂರು ಗ್ರಾಮದಲ್ಲಿ ಡಿ.29ರಂದು ಸಂಜೆ 5.15ಕ್ಕೆ ನಡೆದಿದೆ.
ಆಲೂರು ಗ್ರಾಮದ 54ವರ್ಷದ ನಾಗು ಪೂಜಾರ್ತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ಸುಮಾರು 15 ವರ್ಷದಿಂದ ಮಾನಸಿಕ ಖಿನ್ನತೆಯಿಂದ ಬಳಲುತಿದ್ದು, ಚಿಕಿತ್ಸೆ ಪಡೆದರೂ ಗುಣಮುಖವಾಗಿರುವುದಿಲ್ಲ. ಇದೇ ಕಾರಣದಿಂದ ಜೀವನದಲ್ಲಿ ಮನನೊಂದು ಡಿ.29ರಂದು ಸಂಜೆ ವಿಷ ಪದಾರ್ಥವನ್ನು ಸೇವಿಸಿ ಅಸ್ವಸ್ಥಗೊಂಡಿದ್ದರು.
ತಕ್ಷಣವೇ ಅವರನ್ನು ಕುಂದಾಪುರ ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ, ಅಲ್ಲಿ ಪರೀಕ್ಷಿಸಿದ ವೈದ್ಯರು ನಾಗು ಪೂಜಾರ್ತಿ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.