ಉಡುಪಿ: ಎರಡು ತಿಂಗಳಿಂದ ಜಿಲ್ಲಾಸ್ಪತ್ರೆಯ ಶೀತಲೀಕೃತ ಶವ ರಕ್ಷಣಾ ಘಟಕದಲ್ಲಿ ರಕ್ಷಿಸಿಡಲಾಗಿದ್ದ, ಶವದ ವಾರಸುದಾರರು ಬಾರದೆ ಇರುವುದರಿಂದ, ಅಂತ್ಯಸಂಸ್ಕಾರವನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ಹಾಗೂ ಪೋಲಿಸರು ಬೀಡಿನಗುಡ್ಡೆ ಹಿಂದು ರುದ್ರಭೂಮಿಯಲ್ಲಿ ನಡೆಸಿದರು.
ಶವಸಂಸ್ಕಾರ ಕಾರ್ಯದಲ್ಲಿ ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು, ತನಿಖಾ ಸಹಾಯಕ ವಿಶ್ವನಾಥ ಶೆಟ್ಟಿ ಅಮಾಸೆಬೈಲು, ಭಾಗಿಯಾಗಿದ್ದರು. ರಕ್ಷಣಾ ಸಿಬ್ಬಂದಿ ಯತೀಶ್, ಪ್ಲವರ್ ವಿಷ್ಣು, ಅಣ್ಣಪ್ಪ ಪೂಜಾರಿ ಕರಂಬಳ್ಳಿ ಸಹಕರಿಸಿದರು.
ಮೃತ ಮಹಿಳೆಯನ್ನು 57ವರ್ಷದ ಗೀತಾ ಬಂಟ್ವಾಳಕರ್ ಎಂದು ಗುರುತಿಸಲಾಗಿದೆ. ಇವರು ಕಲ್ಪನಾ ಚಿತ್ರಮಂದಿರ ಸಮೀಪದ ವಸತಿ ಸಂಕೀರ್ಣವೊಂದರಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. ಅಸ್ವಸ್ಥರಾಗಿ ಗಂಭೀರ ಸ್ಥಿತಿಯಲ್ಲಿದ್ದಾಗ, ಸಾರ್ವಜನಿಕರ ಕರೆಗೆ ಸ್ಪಂದಿಸಿದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲುಪಡಿಸಿದ್ದರು. ಬಳಿಕ ಮಹಿಳೆ ಚಿಕಿತ್ಸೆಗೆ ಸ್ಪಂದಿಸಿದೆ ಮೃತಪಟ್ಟಿದ್ದರು. ಶವವನ್ನು ಸಂಬಂಧಿಕರ ಬರುವಿಕೆಗಾಗಿ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಡಲಾಗಿತ್ತು.