News Kannada
Wednesday, February 01 2023

ಉಡುಪಿ

ಉಡುಪಿ: ರಾಜ್ಯ ಬಿಜೆಪಿ ಸರಕಾರ ಐತಿಹಾಸಿಕ ನಿರ್ಣಯ ಅಭಿನಂದನೀಯ- ಶಿವಕುಮಾರ್ ಅಂಬಲಪಾಡಿ

Photo Credit : News Kannada

ಉಡುಪಿ:  ಬಿಲ್ಲವ, ಈಡಿಗ, ನಾಮದಾರಿ ಸಹಿತ 26 ಉಪ ಪಂಗಡಗಳ ಹಲವಾರು ವರ್ಷಗಳ ಬೇಡಿಕೆಯನ್ನು ಮನ್ನಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಈ ಸಮುದಾಯಗಳ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಉನ್ನತಿಗಾಗಿ ‘ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ’ವನ್ನು ಡಿ.5ರಂದು ಘೋಷಿಸಿರುವ ಐತಿಹಾಸಿಕ ನಿರ್ಣಯ ಅಭಿನಂದನೀಯ ಎಂದು ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಸಮಿತಿ ಸದಸ್ಯ ಹಾಗೂ ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ ತಿಳಿಸಿದ್ದಾರೆ.

ಈ ಹಿಂದೆ ಸದ್ರಿ ಸಮುದಾಯಗಳ ಶ್ರೇಯೋಭಿವೃದ್ಧಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಒಂದು ಪ್ರತ್ಯೇಕ ಕೋಶದ ರಚನೆ ಸಹಿತ ಪ್ರತ್ಯೇಕ ಕಾರ್ಪಸ್ ಫಂಡ್ ಕಾದಿರಿಸಿ ಸ್ಥಾಪಿಸಲಾಗಿರುವ ‘ಶ್ರೀ ನಾರಾಯಣಗುರು ಅಭಿವೃದ್ಧಿ ಕೋಶ’ವನ್ನು ಪರಿವರ್ತಿಸಿ ಇದೀಗ ‘ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ’ವನ್ನಾಗಿ ಘೋಷಿಸುವ ಜೊತೆಗೆ ಮುಂದಿನ ಆಯ ವ್ಯಯದಲ್ಲಿ ಸೂಕ್ತ ಅನುದಾನವನ್ನು ಮೀಸಲಿಡುವುದಾಗಿ ತಿಳಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಸಮುದಾಯದ ಪರವಾಗಿ ಹಾರ್ದಿಕ ಅಭಿನಂದನೆಗಳು.

ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನವನ್ನು ನಡೆಸಿರುವ ಸಮುದಾಯದ ಸಚಿವರು, ಶಾಸಕರು, ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು, ಉಡುಪಿ ಸಹಿತ ಜಿಲ್ಲೆಯ ಎಲ್ಲ ಶಾಸಕರು, ಸಮುದಾಯದ ಸ್ವಾಮೀಜಿಗಳು ಹಾಗೂ ಮುಖಂಡರು, ಸಮುದಾಯದ ಸಂಘಟನೆಗಳ ಪ್ರಮುಖರು, ಪದಾಧಿಕಾರಿಗಳು ಮತ್ತು ಸಮಸ್ತ ಬಿಲ್ಲವ, ಈಡಿಗ, ನಾಮಧಾರಿ ಸಹಿತ 26 ಉಪ ಪಂಗಡಗಳ ಸಮಾಜ ಬಾಂಧವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

See also  ಕಾರ್ಕಳ: ಜೀವನದಲ್ಲಿ ಜಿಗುಪ್ಸೆ, ವ್ಯಕ್ತಿ ನೇಣಿಗೆ ಶರಣು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು