News Kannada
Sunday, January 29 2023

ಉಡುಪಿ

ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿ ಬರಹ: ಕಾರ್ಕಳದ ಇಬ್ಬರು ಆರೋಪಿಗಳಿಗೆ ದಂಡ ವಿಧಿಸಿದ ನ್ಯಾಯಾಲಯ

Karkala court imposes fine on two accused for making derogatory remarks against Sunil Kumar
Photo Credit : Facebook

ಕಾರ್ಕಳ: ಇಂಧನ, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಕಾರ್ಕಳದ ಇಬ್ಬರು ಸ್ಥಳೀಯ ಮುಖಂಡರಿಗೆ ಬೆಂಗಳೂರಿನ 12ನೇ ಸಿಟಿ ಸಿವಿಲ್ ನ್ಯಾಯಾಲಯ ದಂಡ ವಿಧಿಸುವ ಜತೆಗೆ ಬಹಳ ಬೇಷರತ್ ಕ್ಷಮೆಯಾಚನೆಗೆ ಸೂಚಿಸಿದೆ.

ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಯೋಗೇಶ್ ನಯನಾ ಇನ್ನಾ ಹಾಗೂ ರಾಧಾಕೃಷ್ಣ ನಾಯಕ್ ಎಂಬುವರು ಸುನಿಲ್ ಕುಮಾರ್ ವಿರುದ್ಧ ಫೇಸ್ ಬುಕ್ ಹಾಗೂ ಇತರೆ ಜಾಲತಾಣದಲ್ಲಿ ಅವಹೇಳನಕಾರಿ, ಸುಳ್ಳು ಹಾಗೂ ದುರುದ್ದೇಶಪೂರಿತ ಬರಹವನ್ನು ಪ್ರಕಟಿಸಿದ್ದರು.

ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ನ್ಯಾಯಾಲಯದ ಮೊರೆ ಹೋದ ಸುನಿಲ್ ಕುಮಾರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳು ಬೇಷರತ್ ಕ್ಷಮೆ ಯಾಚಿಸುವ ಜತೆಗೆ ತಲಾ 25 ಸಾವಿರ ರೂ. ದಂಡ ಸಲ್ಲಿಸಬೇಕು. ಜತೆಗೆ ಆಧಾರ ರಹಿತ, ಅಪ್ರಮಾಣಿಕೃತ, ದುರುದ್ದೇಶಪೂರಿತ ಬರಹಗಳನ್ನು ಜಾಲತಾಣದಲ್ಲಿ ಪ್ರಕಟಿಸದಂತೆ ಪ್ರತಿಬಂಧ ವಿಧಿಸಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ‌ ನೀಡಿರುವ ಸಚಿವ ಸುನಿಲ್ ಕುಮಾರ್, ” ನನ್ನ ವಿರುದ್ಧ ಜಾಲಾತಾಣದಲ್ಲಿ ಕೆಲವರು ವ್ಯವಸ್ಥಿತ ಅಪಪ್ರಚಾರ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದೆ. ಈಗ ನನ್ನ ಪರ ತೀರ್ಪು ಬಂದಿದೆ. ಮಾನಹಾನಿಕಾರಿ ಬರಹಗಳನ್ನು ಜಾಲತಾಣದಲ್ಲಿ ಪ್ರಕಟಿಸುವವರಿಗೆ ಇದೊಂದು ಪಾಠ ಎಂದು ಹೇಳಿದ್ದಾರೆ.*

See also  ತಮಿಳುನಾಡು: ಪುತ್ರನನ್ನು ಬರ್ಬರವಾಗಿ ಹತ್ಯೆಗೈದ ತಂದೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು