News Kannada
Tuesday, February 07 2023

ಉಡುಪಿ

ಉಡುಪಿ: ಇತಿಹಾಸ ಪ್ರಸಿದ್ಧ ಪೆರ್ಣಂಕಿಲ ದೇವಸ್ಥಾನ 10 ಕೋಟಿ ರೂ. ವೆಚ್ಚದಲ್ಲಿ ಸಮಗ್ರ ಜೀರ್ಣೋದ್ಧಾರ

Udupi: The historic Pernankila temple in Udupi has been allotted Rs 10 crore. Comprehensive restoration at a cost
Photo Credit : News Kannada

ಉಡುಪಿ: ತಾಲೂಕಿನ‌ ಪುರಾತನ ದೇವಸ್ಥಾನಗಳಲ್ಲಿ ಒಂದಾಗಿರುವ ಪೇಜಾವರ ಮಠದ ಆಡಳಿತಕ್ಕೊಳಪಟ್ಟಿರುವ ಪೆರ್ಣಂಕಿಲದ ಶ್ರೀ ಮಹಾಲಿಂಗೇಶ್ವರ – ಶ್ರೀ ಮಹಾಗಣಪತಿ ದೇವಸ್ಥಾನ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಸಂಪೂರ್ಣ ಜೀರ್ಣೋದ್ಧಾರಗೊಳ್ಳಲಿದ್ದು, ಫೆ. 23ರಂದು ದೇವರ ಬಿಂಬದ ಸಂಕೋಚನದಿಂದ ಜೀರ್ಣೋದ್ಧಾರ ಕಾಮಗಾರಿ ಶುರುವಾಗಲಿದೆ ಎಂದು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹರಿದಾಸ ಭಟ್ ಮುಂಬೈ ಹೇಳಿದರು.

ಪೆರ್ಣಂಕಿಲದ ಶ್ರೀ ಮಹಾಲಿಂಗೇಶ್ವರ- ಮಹಾಗಣಪತಿ ದೇವಸ್ಥಾನದಲ್ಲಿ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ದೇಗುಲ ಸುಮಾರು ಒಂದು ಸಾವಿರ ವರ್ಷಗಳ ಹಿಂದೆ ಅಳುಪ ವಂಶದ ರಾಣಿ ಬಲ್ಲ ಮಹಾದೇವಿ ಆಡಳಿತಾವಧಿಯಲ್ಲಿ ನಿರ್ಮಾಣಗೊಂಡಿದೆ ಎಂಬ ಇತಿಹಾಸವಿದೆ ಎಂದರು.

ಜ.12ರಂದು ಜೀರ್ಣೋದ್ಧಾರದ ಪ್ರಾಥಮಿಕ ವಿಧಿಯಾಗಿ ಕೊಪ್ಪರಿಗೆ ಅಪ್ಪ ಸೇವೆ, 100 ನಾರಿಕೇಳ ಗಣಹೋಮ, ಶತ ರುದ್ರಾಭಿಷೇಕ, ಮೃತ್ಯುಂಜಯ ಹೋಮ, ಐಕ್ಯಮತ ಹೋಮಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.

ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀಶ ನಾಯಕ್ ಪೆರ್ಣಂಕಿಲ ಮಾತನಾಡಿ, ಊರಿನ ಪ್ರತಿಯೊಂದು ಮನೆಯೂ ಈ ಜೀರ್ಣೋದ್ಧಾರದಲ್ಲಿ ಕೈಜೋಡಿಸಬೇಕು ಎಂಬ ಪರಿಕಲ್ಪನೆಯಡಿಯಲ್ಲಿ ಶಿಲಾನ್ಯಾಸಕ್ಕೆ ಒಂದು ಸಾವಿರ ಕಲ್ಲುಗಳನ್ನು ಸಿದ್ದಪಡಿಸಲಾಗಿದೆ. ಶಿಲಾನ್ಯಾಸದಂದು ಪ್ರತಿಯೊಂದು ಮನೆಯವರು ಬಂದು ಉಚಿತವಾಗಿ ಈ ಕಲ್ಲುಗಳಿಂದ ತಾವೇ ಶಿಲಾನ್ಯಾಸ ನಡೆಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪೇಜಾವರ ಮಠದ ದಿವಾನರಾದ ಸುಬ್ರಹ್ಮಣ್ಯ ಭಟ್ ಸಗ್ರಿ, ದೇವಳದ ಸಾರ್ವಜನಿಕ ಸಂಪರ್ಕಾಧಿಕಾರಿ ಹರೀಶ ಸರಳಾಯ ಉಪಸ್ಥಿತರಿದ್ದರು.

See also  ಸೆಪ್ಟೆಂಬರ್ 13 ರಿಂದ 19 ರ ವರೆಗೆ ಹಣಕೋಣ ಸಾತೇರಿ ದೇವಿಯ ಜಾತ್ರಾ ಮಹೋತ್ಸವ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು