News Kannada
Monday, January 30 2023

ಉಡುಪಿ

ಉಡುಪಿ ಕೃಷ್ಣಮಠದಲ್ಲಿ ವೈಭವದ ಮೂರು ರಥೋತ್ಸವ

Photo Credit : News Kannada

ಉಡುಪಿ: ಮಕರ ಸಂಕ್ರಾಂತಿ ಅಂಗವಾಗಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ಬ್ರಹ್ಮರಥ ಸಹಿತ ಮೂರು ರಥೋತ್ಸವ ಇಂದು ರಾತ್ರಿ ನಡೆಯಿತು.

ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಸಂಭ್ರಮ ಸಡಗರದಿಂದ ರಥೋತ್ಸವದಲ್ಲಿ ಜರುಗಿತು. ಸಾವಿರಾರು ಸಂಖ್ಯೆಯ ಭಕ್ತಾದಿಗಳು ದೇವರ ದರ್ಶನ ಪಡೆದು, ಮೂರು‌ ರಥೋತ್ಸವದ ವೈಭವವನ್ನು ಕಣ್ತುಂಬಿಕೊಂಡರು.

ಶ್ರೀಕೃಷ್ಣ, ಮುಖ್ಯಪ್ರಾಣ, ಅನಂತೇಶ್ವರ, ಚಂದ್ರಮೌಳೀಶ್ವರ ದೇವರ ಉತ್ಸವ ಮೂರ್ತಿಗಳನ್ನು ಮೂರು ರಥಗಳಲ್ಲಿ ಇರಿಸಿ ವೈಭವದಿಂದ ಪೂಜೆ ಸಲ್ಲಿಸಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ತೆಪ್ಪೋತ್ಸವ ನಡೆದ ಬಳಿಕ ರಥೋತ್ಸವ ನಡೆಯಿತು.

ರಥಬೀದಿ ಸುತ್ತಲೂ ವಿದ್ಯುತ್‌ ಅಲಂಕಾರಗಳಿಂದ ಶೃಂಗಾರ ಮಾಡಲಾಗಿತ್ತು. ಆಕರ್ಷಕ ಸುಡುಮದ್ದು, ನಾಸಿಕ್‌ ಬ್ಯಾಂಡ್‌ ರಥೋತ್ಸವ ಸೊಬಗನ್ನು ಇಮ್ಮಡಿಗೊಳಿಸಿತು.

ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಮಠದ ವಿದ್ಯಾಧೀಶತೀರ್ಥ ಸ್ವಾಮೀಜಿ, ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಕಾಣಿಯೂರು ಮಠದ ವಿದ್ಯಾವಲ್ಲಭತೀರ್ಥ ಸ್ವಾಮೀಜಿ, ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿ, ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ, ಶಿರೂರು ಮಠದ ವೇದವರ್ಧನತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು.

See also  ಕುಂದಾಪುರ: ಶ್ರೀಮಾರಿಕಾಂಬಾ ದೇವಿ ದೇವಸ್ಥಾನ ಕೆಳಾಕಳಿ ಶರನ್ನವರಾತ್ರಿ ಉತ್ಸವ ಆಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು