ಉಡುಪಿ: ಜಿಲ್ಲಾ ರಜತ ಮಹೋತ್ಸವ” ಸಮಾರಂಭದ ಅಂಗವಾಗಿ ಜನವರಿ 20, 21 ಮತ್ತು 22 ರಂದು ಮಲ್ಪೆ ಬೀಚ್ ನಲ್ಲಿ ಆಯೋಜಿಸಲಾದ “ಬೀಚ್ ಉತ್ಸವ”ದ ಪೂರ್ವ ತಯಾರಿ ಕುರಿತ ಸಭೆಯು ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಮಲ್ಪೆ ಕಡಲ ಕಿನಾರೆಯಲ್ಲಿ ಇಂದು ನಡೆಯಿತು.
ನಗರಸಭಾ ಸದಸ್ಯರು, ಮಲ್ಪೆಯ 5 ಭಜನಾ ಮಂಡಳಿಗಳ ಪದಾಧಿಕಾರಿಗಳು, ಸ್ಥಳೀಯರು ಹಾಗೂ ಇಲಾಖಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್, ಜಿಪಂ ಸಿಇಒ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಷನ್ ಕುಮಾರ್ ಶೆಟ್ಟಿ, ನಗರ ಸಭೆಯ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ಮಾಜಿ ನಗರಸಭಾ ಸದಸ್ಯ ಪಾಂಡುರಂಗ ಮಲ್ಪೆ, ಜ್ಞಾನಜ್ಯೋತಿ ಭಜನಾ ಮಂದಿರ ಅಧ್ಯಕ್ಷ ಜ್ಞಾನೇಶ್ವರ ಕೋಟ್ಯಾನ್, ಶಿವ ಪಂಚಾಕ್ಷರಿ ಭಜನಾ ಮಂದಿರದ ಅಧ್ಯಕ್ಷ ವಿಕ್ರಮ್ ಶ್ರೀಯಾನ್, ಶ್ರೀರಾಮ ಬಾಲಕರ ಭಜನಾ ಮಂದಿರದ ಅಧ್ಯಕ್ಷ ಕರುಣಾಕರ್ ಸಾಲ್ಯಾನ್, ಹನುಮಾನ್ ವಿಠೋಭ ಭಜನಾ ಮಂದಿರದ ಅಧ್ಯಕ್ಷ ದಯಾನಂದ್, ಶ್ರೀ ಪಂಡರಿನಾಥ ಭಕ್ತಿ ಉದಯ ಮಂದಿರದ ಅಧ್ಯಕ್ಷರಾದ ಧನಂಜಯ್, ಹಿಂದೂ ಯುವ ಸೇನೆ ಜಿಲ್ಲಾ ಘಟಕದ ಅಧ್ಯಕ್ಷರಾದ ಮಂಜು ಕೊಳ, ಹಾಗೂ ನಗರಸಭಾ ಸದಸ್ಯರು ಸ್ಥಳೀಯರು ಉಪಸ್ಥಿತರಿದ್ದರು.