News Kannada
Thursday, February 02 2023

ಉಡುಪಿ

ಮಣಿಪಾಲದಲ್ಲಿ ಯೋಗಥಾನ್ ಗೆ ಚಾಲನೆ; ಯೋಗಕ್ಕೆ ವಿಶ್ವಮಾನ್ಯತೆ- ರಘುಪತಿ ಭಟ್

Photo Credit : News Kannada

ಉಡುಪಿ: ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗಿರುವ ಭಾರತದ ಯೋಗ ಪದ್ದತಿಗೆ ವಿಶ್ವ ಮಾನ್ಯತೆ ದೊರೆತಿದ್ದು, ಪ್ರತಿದಿನ ಯೋಗಾಸನ ಮಾಡುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ ಎಂದು ಶಾಸಕ ರಘುಪತಿ ಭಟ್ ಹೇಳಿದರು.

ಅವರು ಇಂದು ಮಣಿಪಾಲದ ಎಂಡ್ ಪಾಯಿಂಟ್ ನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮತ್ತು ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಯೋಗಥಾನ್ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ವಿಶ್ವಸಂಸ್ಥೆಯು ಭಾರತದ ಯೋಗ ಪದ್ದತಿಯ ಮಹತ್ವವನ್ನು ಜಗತ್ತಿಗೆ ಸಾರಲು ಜೂನ್ 21 ರಂದು ವಿಶ್ವದಾದ್ಯಂತ ವಿಶ್ವ ಯೋಗ ದಿನವನ್ನಾಗಿ ಆಚರಿಸುವಂತೆ ಘೋಷಣೆ ಮಾಡುವÀ ಮೂಲಕ ಯೋಗಕ್ಕೆ ವಿಶ್ವ ಮಾನ್ಯತೆ ದೊರೆತಿದೆ, ನಿರಂತರವಾಗಿ ಯೋಗ ಅಭ್ಯಾಸ ಮಾಡುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯ ಪಡೆಯಲು ಸಾಧ್ಯವಿದೆ, ಒತ್ತಡ ನಿವಾರಣೆಗೆ ಯೋಗ ಪರಿಹಾರ ನೀಡಲಿದ್ದು, ಪ್ರತಿಯೊಬ್ಬರೂ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವ ಮೂಲಕ ಒತ್ತಡ ಮುಕ್ತ ಮತ್ತು ಆರೋಗ್ಯಯುತ ಜೀವನ ನಡೆಸಲು ಸಾಧ್ಯ ಎಂದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸ್ವಾಗತಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿ, ವಂದಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ,ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಡಿಡಿಪಿಐ ಗಣಪತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಮಾಹೆಯ ಕರ್ನಲ್ ಪ್ರಕಾಶ್, ಡಾ.ವಿನೋದ್ ಮತ್ತಿತರರು ಉಪಸ್ಥಿತರಿದ್ದರು.

ಸುಮಾರು 15000 ಕ್ಕೂ ಅಧಿಕ ವಿದ್ಯಾರ್ಥಿಗಳು ಯೋಗಾಥಾನ್ ಕಾರ್ಯಕ್ರಮದಲ್ಲಿ ನೊಂದಾಯಿಸಿಕೊಂಡು ಭಾಗವಹಿಸಿದ್ದು, ಸಾರ್ವಜನಿಕರೂ ಕೂಡಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿವಿಧ ಆಸನಗಳನ್ನು ಅಭ್ಯಾಸ ಮಾಡಿದರು.

See also  ಮುಂಬೈ: ಆಸ್ಟ್ರೇಲಿಯಾದಲ್ಲಿ ರಾಮಾಯಣ ನೃತ್ಯರೂಪಕ ಪ್ರದರ್ಶನ, ಪವಿತ್ರಾ ಆರ್ಟ್ ವಿಷುಯಲ್ ತಂಡ ಆಯ್ಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು