News Kannada
Tuesday, January 31 2023

ಉಡುಪಿ

ಹುಬ್ಬಳ್ಳಿ: ಯುವಜನೋತ್ಸವ ಅರ್ಥಪೂರ್ಣ ವಾಗಿ ಜರುಗಿದೆ ಸಿಎಂ ಬೊಮ್ಮಾಯಿ

Photo Credit : News Kannada

ಹುಬ್ಬಳ್ಳಿ: ಏಳು ದಿನಗಳ ಕಾಲ ಅದ್ಭುತವಾದ ಯುವಜನೋತ್ಸವ , ಅರ್ಥಪೂರ್ಣವಾಗಿ ಜರುಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದ ಯುವಕರಿಗೆ ಸ್ಪೂರ್ತಿ
ಇಂದು ಸಮಾರೋಪ ಸಮಾರಂಭ ಜರುಗುತ್ತಿದೆ. ವಿವಿಧ ರಾಜ್ಯಗಳ ಕ್ರೀಡಾ ಪಟುಗಳು ಆಗಮಿಸಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿ ಅರ್ಥಪೂರ್ಣವಾಗಿ ನಡೆಸಿಕೊಟ್ಟಿದ್ದಾರೆ. ಈ ಭಾಗದಲ್ಲಿ ಈ ರೀತಿಯ ಕಾರ್ಯಕ್ರಮಗಳಿಂದ ಯುವಕರಿಗೆ ಸಾಧನೆ ಮಾಡಲು ಸ್ಪೂರ್ತಿ ದೊರೆಯಲಿದೆ.

ನಮ್ಮ ರಾಜ್ಯದ ಯುವ ನೀತಿಯಲ್ಲಿ ಶಿಕ್ಷಣ, ಉದ್ಯೋಗ,ಕ್ರೀಡೆ ಹಾಗೂ ಸಂಸ್ಕ್ರುತಿಗೆ ಮಹತ್ವ ನೀಡಲಾಗಿದೆ. ಯುವಕರಿಗೆ ಎಲ್ಲಾ ರಂಗಗಳಲ್ಲಿ ಅವಕಾಶ ನೀಡಲಾಗಿದೆ.

ಈ ವರ್ಷ ಗ್ರಾಮೀಣ ಕ್ರೀಡೆಗಳನ್ನು ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ಮಟ್ಟದಲ್ಲಿ ಏರ್ಪಡಿಸಿದ್ದು, ಕಬ್ಬಡ್ಡಿ, ಕುಸ್ತಿ, ಖೋ ಖೋ ಮುಂತಾದ ಗ್ರಾಮೀಣ ಸೊಗಡಿರುವ ಕ್ರೀಡೆಗಳನ್ನು ಪ್ರಥಮ ಬಾರಿಗೆ ರಾಜ್ಯದಲ್ಲಿ ಏರ್ಪಡಿಸಿ ಹೊಸ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಅವಕಾಶ ನೀಡಲಾಗುತ್ತಿದೆ ಎಂದರು.

ಗಡ್ಕರಿಯವರಿಗೆ ಬೆದರಿಕೆ: ಸಂಪೂರ್ಣ ತನಿಖೆ
ಹಿಂಡಲಗ ಜೈಲಿನಿಂದ ಕೇಂದ್ರ ಸಚಿವರಿಗೆ ಬೆದರಿಕೆ ಕರೆ ಹೋಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ತಪ್ಪಿಸಿಕೊಂಡಿರುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಂಪೂರ್ಣವಾಗಿ ತನಿಖೆ ಮಾಡಲಾಗುತ್ತಿದೆ. ಅದಕ್ಕಿಂತ ಮುಖ್ಯ ವಾಗಿ ಅವರ ಹಿನ್ನೆಲೆಯನ್ನು ಪರಿಶೀಲಿಸಲಾಗುತ್ತದೆ ಎಂದರು.

See also  ಬೆಂಗಳೂರು: ಇನ್ಫೊಸಿಸ್ ಪ್ರತಿಷ್ಠಾನದ ವತಿಯಿಂದ ಸಂಚಾರಿ ಕಣ್ಣಿನ ಆಸ್ಪತ್ರೆ ಆರಂಭ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು