ಉಡುಪಿ: ಬನ್ನಂಜೆ ಶಿರಿಬೀಡು ಶಕ್ತಿ ಕೇಂದ್ರದ ಸಭೆ ಬನ್ನಂಜೆಯಲ್ಲಿ ಇಂದು ನಡೆಯಿತು. ಸಭೆಯಲ್ಲಿ ಶಾಸಕರಾದ ಕೆ. ರಘುಪತಿ ಭಟ್ ಅವರು ಮಾತನಾಡಿ, ವಿಜಯ ಸಂಕಲ್ಪ ಅಭಿಯಾನದ ತಯಾರಿಯ ಬಗ್ಗೆ ಕಾರ್ಯಕರ್ತರೊಂದಿಗೆ ಚರ್ಚಿಸಿ ಕೇಂದ್ರ, ರಾಜ್ಯ ಸರ್ಕಾರದ ಮತ್ತು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ನಗರ ಸಭಾ ಸದಸ್ಯ ಟಿ.ಜಿ ಹೆಗ್ಡೆ, ಸವಿತಾ ಹರೀಶ್ ರಾಮ್, ಕಡಿಯಾಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ರಾಮ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಕಾರ್ಯದರ್ಶಿ ಆನಂದ್ ಮಠದಬೆಟ್ಟು, ಬನ್ನಂಜೆ ಶಿರಿಬೀಡು ಶಕ್ತಿ ಕೇಂದ್ರದ ಸಂಚಾಲಕ ಮಹೇಶ್ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.