ಉಡುಪಿ: ಕಾಂಗ್ರೆಸ್ ಸರಕಾರದ ಸಾಧನೆಗಳ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ಇದೇ ಬರುವ ಜ.22ರಂದು ಬೆಳಗ್ಗೆ 10ಗಂಟೆಗೆ ಉಡುಪಿಯ ಮಿಶನ್ ಕಂಪೌಂಡ್ ಮೈದಾನದಲ್ಲಿ ‘ಪ್ರಜಾ ಧ್ವನಿ’ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ತಿಳಿಸಿದ್ದಾರೆ.
ಉಡುಪಿ ಕಾಂಗ್ರೆಸ್ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ 25ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಹರಿಪ್ರಸಾದ್, ಮುಖಂಡರಾದ ಕೆ.ಎಚ್.ಮುನಿಯಪ್ಪ, ಡಾ.ಪರಮೇಶ್ವರ, ವೀರಪ್ಪ ಮೊಲಿ, ಎಚ್.ಕೆ.ಪಾಟೀಲ್, ದಿನೇಶ್ ಗುಂಡೂರಾವ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಎಐಸಿಸಿ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗದ ಉಸ್ತುವಾರಿ ರೋಝೀ ಜೋನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಅಖಿಲ ಭಾರತ ಮೀನುಗಾರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜ್ಯಸಭಾ ಸದಸ್ಯ ಪ್ರತಾಪನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಪೂರ್, ರಾಜ್ಯ ಮೀನಗಾರ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಸೊನೇಗಾರ್, ಪ್ರಖ್ಯಾತ್ ಶೆಟ್ಟಿ, ರಮೇಶ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ, ಹರೀಶ್ ಕಿಣಿ ಉಪಸ್ಥಿತರಿದ್ದರು.