News Kannada
Friday, June 09 2023
ಉಡುಪಿ

ಮಣಿಪಾಲ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ

Manipal: Absconding POCSO case accused arrested
Photo Credit : News Kannada

ಮಣಿಪಾಲ: ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಏಳು ವರ್ಷದ ಹಳೆಯ ಪೋಕ್ಸೋ ಪ್ರಕರಣದ ಆರೋಪಿಯನ್ನು ಮಣಿಪಾಲ ಪೊಲೀಸರು ಭಾರತ-ನೇಪಾಳ ಗಡಿಭಾಗದಲ್ಲಿ ಬಂಧಿಸಿದ್ದಾರೆ.

26ವರ್ಷದ ನೇಪಾಳದ ಜಿತೇಂದ್ರ ಶಾರ್ಕಿ ಬಂಧಿತ ಆರೋಪಿ. ಈತ 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಸುಮಾರು 16 ಬಾರಿ ವಾರೆಂಟ್ ಹಾಗೂ 3 ಬಾರಿ ಅಟ್ಯಾಚ್ ಮೆಂಟ್ ವಾರೆಂಟ್ ಹೊರಡಿಸಲಾಗಿತ್ತು.

ಈತನ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಿದ್ದರು. ಪೊಲೀಸರು ಸತತ ಒಂದು ವಾರಗಳ ಕಾಲ ಭಾರತ-ನೇಪಾಳ ಗಡಿಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಉತ್ತರಾಖಂಡ ರಾಜ್ಯದ ಬನ್ ಬಸಾ ಪೊಲೀಸ್ ಠಾಣೆಯ ವ್ಯಾಪ್ತಿಯ ಗಡಿಕೋಟ್‌ನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ಜ.22ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ..

See also  ಉಡುಪಿ: ಅನಾರೋಗ್ಯದಿಂದ ಕಾರ್ಮಿಕ ಸಾವು, ಅಂತ್ಯಕ್ರಿಯೆ ನೆರವೇರಿಸಿ ಮಾನವೀಯತೆ ಮೆರೆದ ವಿಶು ಶೆಟ್ಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು