News Kannada
Friday, February 03 2023

ಉಡುಪಿ

ಉಡುಪಿ ಜಿಲ್ಲಾಧಿಕಾರಿ ಅವರಿಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ

Udupi Deputy Commissioner wins best district election officer award
Photo Credit : News Kannada

ಉಡುಪಿ: ಭಾರತ ಚುನಾವಣಾ ಆಯೋಗವು 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು, “Nothing like voting, I vote for sure” “ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ” ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸುವಂತೆ ನಿರ್ದೇಶನ ನೀಡಿದ್ದು, ಅದರಂತೆ ರಾಜ್ಯ ಮಟ್ಟದಲ್ಲಿ ಇಂದು ಸರ್‌ ಪುಟ್ಟಣ್ಣಚೆಟ್ಟಿ ಪುರಭವನ ಬೆಂಗಳೂರು ಇಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗಿದೆ.

ಈ ಸಂದರ್ಭದಲ್ಲಿ ರಾಜ್ಯ ಮಟ್ಟದಲ್ಲಿ ವಿವಿಧ ವಿಭಾಗಗಲ್ಲಿ ಉತ್ತಮ ಸಾಧನೆ ಮಾಡಿದ ಅಧಿಕಾರಿ ಸಿಬ್ಬಂದಿಗಳನ್ನು ಆಯ್ಕೆ ಮಾಡಲಾಗಿದ್ದು, ಅದರಂತೆ “ಜಿಲ್ಲಾ ಚುನಾವಣಾಧಿಕಾರಿ” ವಿಭಾಗದಲ್ಲಿ ಆಯ್ಕೆಯಾದ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರಿಗೆ ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರು ಪ್ರಶಸ್ತಿ ನೀಡಿದರು.

ಈ ಪ್ರಶಸ್ತಿ ಪಡೆಯುವಲ್ಲಿ ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳ (ಬಿಎಲ್ಒ), ಮತಗಟ್ಟೆಮಟ್ಟದ ಅಧಿಕಾರಿಗಳ ಮೇಲ್ವಿಚಾರಕರ, ಸಹಾಯಕ ಮತದಾರರ ನೋಂದಣಾಧಿಕಾರಿಗಳ, ಮತದಾರರ ನೋಂದಣಿ ಅಧಿಕಾರಿಯವರ, ಸ್ವೀಪ್‌ ತಂಡ, ಕಾಲೇಜು ಪ್ರಾಂಶುಪಾಲರುಗಳು, ಜಿಲ್ಲೆಯ ಚುನಾವನಾ ಶಾಖೆಯ ಅಧಿಕಾರಿ, ಸಿಬ್ಬಂದಿಗಳು ಮತ್ತು ಜಿಲ್ಲೆಯಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ನೋಂದಣಿ ಮಾಡಿಕೊಂಡ ಯುವ ಮತದಾರರು ಮತ್ತು ಎಲ್ಲಾ ಜಿಲ್ಲೆಯ ಮತದಾರರ ಶ್ರಮವಿದ್ದು ಇವರೆಲ್ಲರನ್ನು ಅಭಿನಂದಿಸುತ್ತಾ, ಮುಂಬರುವ ಚುನಾವಣಾ ಪ್ರಕ್ರೀಯೆಗಳಲ್ಲಿ ಸಹ ಎಲ್ಲಾ ಸಹಕಾರವನ್ನು ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

See also  ಉಡುಪಿ: ಭಾರತದ ಶಿಲ್ಪಕಲೆಗೆ ಅಮರಶಿಲ್ಪಿ ಜಕಣಾಚಾರಿ ಅವರ ಕೊಡುಗೆ ಅಪಾರ- ಅಪರ ಜಿಲ್ಲಾಧಿಕಾರಿ ವೀಣಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು