ಕುಂದಾಪುರ: ಗ್ರಾಮೀಣ ಭಾಗದ ಮಹಿಳೆಯರಿಗೆ ಸಹಕಾರ ಸಂಸ್ಥೆಗಳು ಜೀವನಾಧಾರವಾಗಿವೆ ಮಹಿಳೆಯರು ವಿದ್ಯಾವಂತರಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಸಾಲವನ್ನು ಮರು ಪಾವತಿ ಮಾಡುವ ಗುಣ ಮಹಿಳೆಯರಲ್ಲಿದೆ ಸ್ವ ಸಾಹಯ ಸಂಘಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಮತ್ತು ಮೂರ್ತೆದಾರರ ಸೇವಾ ಸಹಕಾರ ಸಂಘಕ್ಕೆ ಸಹಾಯ ಧನ ನೀಡಲು ಪ್ರಯತ್ನಿಸಲಾಗುವುದು ಎಂದು ಬೈಂದೂರು ಕ್ಷೇತ್ರದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.
ಕುಂದಾಪುರ ತಾಲೂಕಿನ ಹೆಮ್ಮಾಡಿ ಮೂರ್ತೆದಾರರ ಸೇವಾ ಸಹಕಾರ ಸಂಘದ ವತಿಯಿಂದ ಶನಿವಾರ ನಾಡಾ ಗುಡ್ಡೆಯಂಗಡಿಯಲ್ಲಿ ನಡೆದ ನಾಡ ಶಾಖೆಯ ಸ್ವಂತ ಕಟ್ಟಡ ಉದ್ಘಾಟನೆ ಮತ್ತು ಸ್ವ ಸಹಾಯ ಗುಂಪುಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಭದ್ರತಾ ಕೊಠಡಿಯನ್ನು ಉದ್ಘಾಟನೆ ಮಾಡಿದರು. ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಗ್ರಾಹಕರ ಭದ್ರತಾ ಪೆಟ್ಟಿಗೆ ಉದ್ಘಾಟನೆ ಮಾಡಿದರು,ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಎಸ್.ರಾಜು ಪೂಜಾರಿ ಸ್ವಸಾಹಯ ಗುಂಪುಗಲಿಗೆ ಲಾಭಾಂಶ ವಿತರಿಸಿದರು.
ಹೆಮ್ಮಾಡಿ ಮೂರ್ತೆದಾರರ ಸೇವಾ ಸಹಕಾರ ಸಂಘದ ಅಧ್ಯಕ್ಷ ಉದಯ ಪೂಜಾರಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ನಾಡ ಗ್ರಾ.ಪಂ ಅಧ್ಯಕ್ಷ ದಿನೇಶ್ ಶೆಟ್ಟಿ, ಪಡುಕೋಣೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜೀವ ಪಡುಕೋಣೆ, ನಾಡಾ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಶಂಕರ ಶೆಟ್ಟಿ ಬೆಳ್ಳಾಡಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಾಧಿಕಾರ ಉಡುಪಿ ಡಾ.ಪ್ರೇಮಾನಂದ ಕೆ, ಮೂರ್ತೆದಾರರ ಮಹಾಮಂಡಲ ಬ್ರಹ್ಮಾವರ ಅಧ್ಯಕ್ಷ ಕೊರಗ ಪೂಜಾರಿ, ಮರವಂತೆ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಎಂ ನಾಯಕ್, ಹಾಲು ಉತ್ಪಾದಕರ ಸಹಕಾರಿ ಸಂಘ ಕೋಣ್ಕಿ ಅಧ್ಯಕ್ಷ ರಾಜೀವ ಶೆಟ್ಟಿ ಜಡ್ಡಾಡಿ, ಹಾಗೂ ಸಂಘದ ಉಪಾಧ್ಯಕ್ಷ ನರಸಿಂಹ ಪೂಜಾರಿ ಮತ್ತು ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ನಾಡಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಿಕ್ಮರಿ, ಡಾ.ಸುರೇಶ್ ಕುಮಾರ ಶೆಟ್ಟಿ, ಹಿಂದಿನ ಶಾಖಾ ಕಟ್ಟಡದ ಮಾಲೀಕರಾದ ಶ್ರೀಧರ್ ಶೇಟ್, ತಾಲೂಕು ಪಂಚಾಯತ್ ಕುಂದಾಪುರ ಯೋಜನಾಧಿಕಾರಿ ಅರುಣ್ ಕುಮಾರ್ ಎಸ್.ವಿ ಅವರನ್ನು ಸನ್ಮಾನಿಸಲಾಯಿತು ಹಾಗೂ ಹೆಮ್ಮಾಡಿ ಮೂರ್ತೆದಾರರ ಸೇವಾ ಸಹಕಾರ ಸಂಘ ನಾಡಾ ಶಾಖೆಯ ಸ್ವಂತ ಕಟ್ಟಡ ಉದ್ಘಾಟನೆ ಹಾಗೂ ಸ್ವಸಾಹಯ ಗುಂಪುಗಳ ಸಮಾವೇಶದಲ್ಲಿ ಹಿರಿಯ ಮೂರ್ತೆದಾರರನ್ನು ಸನ್ಮಾನಿಸಲಾಯಿತು.
ನಾಡಾ ಶಾಖೆಯ ಸ್ವಂತ ಕಟ್ಟದ ಉದ್ಘಾಟನಾ ಸಂದರ್ಭದಲ್ಲಿ ನಾಡಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶವ ಶೀತಲೀಕರಣ ಯಂತ್ರವನ್ನು ಹಸ್ತಾಂತರ ಮಾಡಲಾಯಿತು.ಸ್ವಸಾಹಯ ಗುಂಪುಗಳಿಗೆ ಲಾಭಾಂಶ ಘೋಷಣೆ ಮಾಡಲಾಯಿತು.
ಹೆಮ್ಮಾಡಿ ಮೂರ್ತೆದಾರರ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಬಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಆರ್‍ಜಿ ರೇವತಿ ಶೆಟ್ಟಿ ಮತ್ತು ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ನಿರೂಪಿಸಿದರು.