ಕುಂದಾಪುರ: ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ ಮನುಷ್ಯನ ಅರ್ಹತೆ, ಯೋಗ್ಯತೆ ಹಾಗೂ ಚಿಂತನೆ ಬದಲಾಗಬೇಕಾದರೆ ಶಿಕ್ಷಣ ಅತ್ಯಗತ್ಯ ಆಧುನಿಕತೆ ಬೆಳೆದಂತೆ ಗ್ರಾಮೀಣ ಸೊಗಡು ಮರೆಯಾಗುತ್ತಿದೆ ಮಕ್ಕಳಲ್ಲಿ ಸಂಸ್ಕಾರ, ಸಂಸ್ಕøತಿಯ ಬಗ್ಗೆ ಅಭಿಮಾನ ಮೂಡಿಸಬೆಕಾದರೆ ಶಾಲೆಗಳಲ್ಲಿ ನೈತಿಕ ಶಿಕ್ಷಣ ಅಗತ್ಯವಾಗಿದೆ ಎಂದು ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪರಮ ಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಬೈಂದೂರಿನ ಮಯ್ಯಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಅನ್ನಬ್ರಹ್ಮ ಸಭಾಭವನ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ, ಕೃಷ್ಣಮೂರ್ತಿ ಮಂಜ ಮಾರಣಕಟ್ಟೆ,ಯು.ಬಿ. ಶೆಟ್ಟಿ, ಅಲಮಸ್ ಸಹ ಸಂಸ್ಥಾಪಕ ಹಾಗೂ ಮುಖ್ಯ ಕಾರ್ಯತಂತ್ರ ಅಧಿಕಾರಿ ವೆಂಕಟೇಶ ಬಿಜೂರು, ಉಪ್ಪುಂದ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ, ಉದ್ಯಮಿ ಕಿರುಕಿ ಬಾಬು ಪೂಜಾರಿ, ಡಿ.ಕೆ. ಕರ್ನಲ್ ನರಸಿಂಹ ನಾಯ್ಕ, ಎಚ್. ಶೇಷಯ್ಯ ಶೇರುಗಾರ್, ಬಿಇಓ ಮಂಜುನಾಥ ಜಿ,ಎಂ, ಉತ್ಸವ ಸಮಿತಿಯ ಅಧ್ಯಕ್ಷ ವೆಂಕಟೇಶ್ ಪೂಜಾರಿ, ಆರ್ಥಿಕ ಸಮಿತಿಯ ಅಧ್ಯಕ್ಷ ಕೃಷ್ಣಯ್ಯ ವಿ. ಮದ್ದೋಡಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸುಭೋದ ಹಾರ್ವೆ ಉಪಸ್ಥಿತರಿದ್ದರು.
ಕತಾರ್ ದೋಹಾ ಇಂಡಿಯನ್ ಕಲ್ಚರಲ್ ಸೆಂಟರ್ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಸ್ವಸ್ತಿವಾಚನ ಮಾಡಿದರು, ಮುಖ್ಯ ಶಿಕ್ಷಕ ರಾಜು ಎಸ್. ಸ್ವಾಗತಿಸಿ, ಆನಂದ ಮದ್ದೋಡಿ ನಿರೂಪಿಸಿದರು. ಈ ಸಂದರ್ಭ ಶಾಲಾ ಅನ್ನಬ್ರಹ್ಮ ಸಭಾಭವನ ನಿರ್ಮಾಣ ಆರ್ಥಿಕ ಸಹಕಾರ ನೀಡಿದವರನ್ನು ಗೌರವಿಸಲಾಯಿತು.