ಉಡುಪಿ: ಬಿಜೆಪಿ ಹಾವಂಜೆ ಶಕ್ತಿ ಕೇಂದ್ರದ ಸಭೆ ಇಂದು ಹಾವಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಶ್ರೀ ಧೂಮಾವತಿ ದೈವದ ಗುಡಿ ಬಳಿ ನಡೆಯಿತು.
ಶಾಸಕರಾದ ಕೆ. ರಘುಪತಿ ಭಟ್ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಮತ್ತು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪಕ್ಷದ ಕಾರ್ಯಕರ್ತರು ಜನರಿಗೆ ತಿಳಿಸಬೇಕು ಎಂದು ಹೇಳಿದ ಅವರು ಮುಂಬರುವ ಚುನಾವಣೆಗೆ ನಾವೆಲ್ಲರೂ ಒಟ್ಟಾಗಿ ಸಂಘಟಿತರಾಗಬೇಕು ಎಂದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಉಪಾಧ್ಯಕ್ಷರಾದ ಉದಯ್ ಕೋಟ್ಯಾನ್, ಹಾವಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಜಿತ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ನಳಿನಿ ಪ್ರದೀಪ್ ರಾವ್, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ, ಹಾವಂಜೆ ಶಕ್ತಿ ಕೇಂದ್ರದ ಸಂಚಾಲಕರಾದ ಸತೀಶ್ ಶೆಟ್ಟಿ, ಸಹ ಸಂಚಾಲಕರಾದ ಸತ್ಯನಾರಾಯಣ ಆಚಾರ್, ಹಾವಂಜೆ ಗ್ರಾಮ ಪಂಚಾಯತ್ ಸದಸ್ಯರು, ಬೂತ್ ಅಧ್ಯಕ್ಷರು ಹಾಗೂ ಹಾವಂಜೆ ಭಾಗದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.