ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಬೂತ್ ಕಾರ್ಯಕರ್ತರ ಸಮಾವೇಶದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ದಾ ಅವರು ಪ್ರಥಮ ಬಾರಿಗೆ ಉಡುಪಿ ಆಗಮಿಸಿದರು.
ಆದಿ ಉಡುಪಿ ಹೆಲಿಪ್ಯಾಡ್ ಗೆ ಅವರು ಬಂದಿಳಿದರು. ಈ ಸಂದರ್ಭದಲ್ಲಿ ಸಚಿವ ಸುನಿಲ್ ಕುಮಾರ್, ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಸಿ.ಟಿ ರವಿ, ರಘುಪತಿ ಭಟ್, ಪ್ರಮೋದ್ ಮಧ್ವರಾಜ್ ಹಾಗೂ ಉಡುಪಿಯ ಬಿಜೆಪಿ ನಾಯಕರು ರಾಷ್ಟ್ರೀಯ ಅಧ್ಯಕ್ಷರಿಗೆ ಸ್ವಾಗತ ಕೋರಿದರು.