ಕಾರ್ಕಳ: ಅತ್ಯಧಿಕ 236 ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಿರುವುದು ರಾಜ್ಯದಲ್ಲೆ ದಾಖಲೆಯಾಗಿದೆ. ಅಭಿವೃದ್ಧಿ ಕಾಮಗಾರಿಗಳು ಒಂದೇ ಗ್ರಾಮಕ್ಕೆ ಸೀಮಿತವಾಗದೆ ಕಾರ್ಕಳದ ಪ್ರತಿಯೊಂದು ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯ ನಡೆಸಲಾಗುವುದು. ಜನರು ಅಪಪ್ರಚಾರಕ್ಕೆ ಕಿವಿ ಕೊಡದೆ ಅಭಿವೃದ್ಧಿ ಕಡೆ ಆದ್ಯತೆ ನೀಡಿ ಬೆಂಬಲಿಸಬೇಕು ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು. ಇನ್ನಾ ಪೇಟೆಯಲ್ಲಿ ಇನ್ನಾ ಶಕ್ತಿ ಕೇಂದ್ರದ ಗ್ರಾಮ ಸಮಾವೇಶ-2023 ಕಾರ್ಯಕ್ರಮದಲ್ಲಿ ಮಾತನಾಡಿದರು.
ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುನಿರಾಜ್ ಶೆಟ್ಟಿ, ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷ ಮಹಾವೀರ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಜಯರಾಮ್ ಸಾಲಿಯನ್ ಬೋಳ, ಮುಂಡ್ಕೂರು ಮಹಾ ಶಕ್ತಿ ಕೇಂದ್ರದ ಕಾರ್ಯದರ್ಶಿ ಸತೀಶ್ ಪೂಜಾರಿ ಬೋಳ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಿಜೆಪಿ ಉಡುಪಿ ಜಿಲ್ಲಾ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಇನ್ನಾ ಶಕ್ತಿ ಕೇಂದ್ರದ ಅಧ್ಯಕ್ಷ ದಿನೇಶ್ ಕೋಟ್ಯಾನ್, ವಾರ್ಡ್ ಸದಸ್ಯರಾದ ಮನೋಜ್, ಪ್ರಸಾದ್ ಶೆಟ್ಟಿ, ಪ್ರೇಮ ಕುಲಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇನ್ನಾ ಗ್ರಾಮಸ್ಥರ ಪರವಾಗಿ ಸಚಿವ ಸುನಿಲ್ ಕುಮಾರ್ ಅವರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಕಡೆಕುಂಜ ನಿವಾಸಿ ಪುಷ್ಪರಾಜ್ ಮೂಲ್ಯ ಬಿಜೆಪಿ ಸೇರ್ಪಡೆಗೊಂಡರು. ಇನ್ನಾ ಗ್ರಾಮ ಪಂಚಾಯತ್ ಸದಸ್ಯ ಚಂದ್ರಹಾಸ ಶೆಟ್ಟಿ ಸ್ವಾಗತಿಸಿ, ಶಕ್ತಿ ಕೇಂದ್ರದ ಅಧ್ಯಕ್ಷ ದಿನೇಶ್ ಕೋಟ್ಯಾನ್ ವಂದಿಸಿದರು. ಸುಕೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.