ಕುಂದಾಪುರ: ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹೆಮ್ಮಾಡಿ ಸರ್ಕಲ್ ಅನ್ನು ಅವೈಜ್ಞಾನಿಕವಾಗಿ ನಿರ್ಮಿಸಿದ ಪರಿಣಾಮ ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ ವಾಹನ ಸವಾರರು ಸ್ವಲ್ಪ ಮೈ ಮರೆತರು ಆಕ್ಸಿಡೆಂಟ್ ಗ್ಯಾರಂಟಿ.
ಚರ್ತುಮುಖ ರಸ್ತೆ ಹೊಂದಿರುವ ಹೆಮ್ಮಾಡಿ ಸರ್ಕಲ್ ಅನ್ನು ಅವೈಜ್ಞಾನಿಕವಾಗಿ ನಿರ್ಮಿಸಿದ ಕಾರಣ ಇಲ್ಲಿ ಹಲವಾರು ಅಪಘಾತಗಳು ಸಂಭವಿಸಿ ಜೀವನ ಹಾನಿ ನಷ್ಟ ಉಂಟಾಗುತ್ತಿದೆ, ಪಾದಚಾರಿಗಳಿಗೆ ರಸ್ತೆಯನ್ನು ದಾಟಿ ಹೋಗುವುದು ದುಸ್ತರವಾಗಿದ್ದು ಸಿಗ್ನಲ್ ಲೈಟ್ ಅಳವಡಿಸಿಸ ಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ವಿಶ್ವ ಖ್ಯಾತಿಯನ್ನು ಹೊಂದಿರುವ ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹಾಗೂ ಪ್ರಸಿದ್ಧ ಶ್ರೀ ಕ್ಷೇತ್ರ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಸಂಪರ್ಕಿಸುವ ಮುಖ್ಯ ಸರ್ಕಲ್ ಇದಾಗಿದ್ದು ದಿನನಿತ್ಯ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಸಾವಿರಾರು ಭಕ್ತಾಧಿಗಳು, ಸಾರ್ವಜನಿಕರು ಚಲಿಸುತ್ತಾರೆ.
ವಾಹನ ದಟ್ಟಣೆಯಿಂದ ಕೂಡಿರುವ ಸರ್ಕಲ್ ಮಧ್ಯ ಭಾಗದಲ್ಲಿ ಬಸ್ಸುಗಳನ್ನು ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದಾರೆ ಇಲ್ಲಿ ಹೇಳುವವರು ಕೇಳುವವರು ಯಾರೂ ಇಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಿ ಹೆಮ್ಮಾಡಿ ಸರ್ಕಲ್ ನಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕ್ಕೆನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.