News Kannada
Friday, March 31 2023

ಉಡುಪಿ

ಕೊರಗರು ಎಲ್ಲ‌ ಸಮುದಾಯದವರೊಂದಿಗೆ ಬೆರೆಯುವ ವಾತಾವರಣ ಸೃಷ್ಟಿಯಾಗಬೇಕು: ಶಾಸಕ ರಘುಪತಿ‌ ಭಟ್ 

An atmosphere should be created where the Koragas mingle with all communities.
Photo Credit : News Kannada

ಉಡುಪಿ: ಜಿಲ್ಲೆಯ ಮೂಲ ನಿವಾಸಿಗಳಾದ ಕೊರಗ ಸಮುದಾಯದವಲ್ಲಿ ಆತ್ಮ ವಿಶ್ವಾಸ ಮೂಡಿಸಿ,ಅವರನ್ನು ಇತರ ಸಮುದಾಯಗಳೊಂದಿಗೆ ಮುಕ್ತವಾಗಿ ಬೆರೆಯಲು ಮಾನಸಿಕವಾಗಿ ಸದೃಢಗೊಳಿಸಲು ಎಲ್ಲಾ ಸಮುದಾಯದವರೂ ಪ್ರಯತ್ನಿಸಬೇಕು, ಕೊರಗ ಸಮುದಾಯದ ಜನತೆಯೂ ಸಹ ಶಿಕ್ಷಣವಂತರಾಗಿ ಆತ್ಮ ವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು.

ಅವರು ಇಂದು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಉಡುಪಿ ನಗರಸಭೆ ಹಾಗೂ ಕೊರಗ ಸಂಘಟನೆಗಳ ಸಹಯೋಗದೊಂದಿಗೆ, ಪುತ್ತೂರು ನಲ್ಲಿ 3 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಆದಿವಾಸಿ ಸಮುದಾಯ ಭವನ ವನ್ನು ಉದ್ಘಾಟಿಸಿ ಮಾತನಾಡಿದರು.

ಕೊರಗ ಸಮುದಾಯದವರು ತಾವು ಹಿಂದೆ ಅನುಭವಿಸಿದ ಶೋಷಣೆ ಮತ್ತು ಅದರಿಂದ ತಮ್ಮಲ್ಲಿ ಉಂಟಾಗಿರುವ ಕೀಳಿರಿಮೆಯನ್ನು ತೊರೆಯಲು ಶಿಕ್ಷಣದಿಂದ ಸಾಧ್ಯ, ಶಿಕ್ಷಣ ಪಡೆಯುವುದರಿಂದ ಮಾನಸಿಕವಾಗಿ ಸದೃಡರಾಗಲು ಸಾಧ್ಯವಿದ್ದು, ತಮ್ಮ ಮಕ್ಕಳಿಗೆ ತಪ್ಪದೇ ಶಿಕ್ಷಣ ಕೊಡಿಸಬೇಕು ಹಾಗೂ ಇತರೆ ಸಮುದಾಯದವರೂ ಸಹ ಕೊರಗ ಸಮುದಾಯದ ಸಮಗ್ರ ಅಭಿವೃಧ್ದಿಗೆ ಹಾಗೂ ಅವರೊಂದಿಗೆ ಮುಕ್ತವಾಗಿ ಬೆರೆಯುವ ವಾತಾವರಣ ನಿರ್ಮಿಸಲು ಸರ್ವ ರೀತಿಯಲ್ಲೂ ಸಹಕಾರ ನೀಡಬೇಕು ಎಂದರು.

ಪ್ರಸ್ತುತ ನಿರ್ಮಿಸಿರುವ ಸಮುದಾಯ ಭವನವು ಕೊರಗ ಸಮುದಾಯದ ಆತ್ಮ ವಿಶ್ವಾಸದ ಸಂಕೇತವಾಗಿದ್ದು, ಈ ಭವನದಲ್ಲಿ ಸಭೆಗಳು, ಚರ್ಚೆಗಳು, ವಿಚಾರಗೋಷ್ಠಿಗಳು ನಡೆಯಲು ಅನುಕೂಲವಾಗುವಂತೆ ಸೂಕ್ತ ವ್ಯವಸ್ಥೆಗಳು ಮತ್ತು ತಾಂತ್ರಿಕ ಸೌಲಭ್ಯಗಳನ್ನು ಒದಗಿಸುವಂತೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಕೊರಗ ಸಮುದಾಯದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸಹಾಯಧನದ ಚೆಕ್ ಗಳನ್ನು ಶಾಸಕರು ವಿತರಿಸಿದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಕೊರಗ ಸಮುದಾಯದ ಅನೇಕರಿಗೆ ಇನ್ನೂ ಉಚಿತ ಭೂಮಿ ದೊರೆತಿಲ್ಲ ಈ ಬಗ್ಗೆ ಜಿಲ್ಲಾಡಳಿತ ಗಮನಹರಿಸಿ ಸೂಕ್ತ ಸ್ಥಳ ಗುರುತಿಸಿ ಜಾಗ ನೀಡಬೇಕು, ಪ.ಜಾತಿ ಮತ್ತು ಪ.ವರ್ಗದಲ್ಲಿ ಅತ್ಯಂತ ಹಿಂದುಳಿದಿರುವ ಈ ಸಮಾಜವು ಶಿಕ್ಷಣ ಮತ್ತು ಉದ್ಯೋಗದಲ್ಲಿ ತುಂಬಾ ಹಿಂದುಳಿದಿದ್ದು, ಈ ಕ್ಷೇತ್ರಗಳಲ್ಲಿ ಇವರಿಗೆ ಹೆಚ್ಚಿನ ಸೌಲಭ್ಯಗಳನ್ನು ದೊರಕಿಸುವ ಅಗತ್ಯವಿದ್ದು, ಉಳಿದ ಸಮುದಾಯಗಳೂ ಇವರ ಅಭಿವೃಧ್ದಿಗೆ ಕೈಜೋಡಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಮಾತನಾಡಿ, ಕೊರಗ ಸಮುದಾಯದವರು ತಮ್ಮ ಮಕ್ಕಳಿಗೆ ಹೆಚ್ಚಿನ ಶಿಕ್ಷಣ ನೀಡಬೇಕು, ಜಿಲ್ಲೆಯಲ್ಲಿ ಆಶ್ರಮಶಾಲೆಗಳಲ್ಲಿ ಉಚಿತ ಊಟ ವಸತಿಯೊಂದಿಗೆ ಉತ್ತಮ ಶಿಕ್ಷಣ ಸೌಲಭ್ಯಗಳಿದ್ದು, ತಮ್ಮ ಮಕ್ಕಳನ್ನು ಅಲ್ಲಿಗೆ ಸೇರ್ಪಡೆ ಮಾಡಬೇಕು, ಸಮುದಾಯದ ಸಮಗ್ರ ಅಧ್ಯಯನ ಕುರಿತಂತೆ ಸಮೀಕ್ಷೆ ನಡೆಸಲಾಗುತ್ತಿದ್ದು, ಇವರ ಸಮಗ್ರ ಶ್ರೇಯೋಭಿವೃದ್ದಿಗೆ ಜಿಲ್ಲಾಡಳಿತ ಬದ್ದವಾಗಿದ್ದು, ಜನತೆ ಶಿಕ್ಷಣವಂತರಾಗಿ ಮತ್ತು ಜಾಗೃತರಾಗಿ ತಮಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆ ಅಧ್ಯಕ್ಷೆ ಸಮಿತ್ರಾ ನಾಯಕ್ , ಕುಂದಾಪುರ ಪುರಸಭೆ ಸದಸ್ಯ ಪ್ರಭಾಕರ್, ಉಡುಪಿ ತಾಲೂಕು ಸಮಾಜ ಕಲ್ಯಾಣಾಧಿಕಾರಿ ರಮೇಶ್, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಹಾಯಕ ಇಂಜಿನಿಯರ್ ರಾಮು,ಕೊರಗ ಸಮುದಾಯುದ ಬಾಬು ಪಾಂಗಾಳ, ಬೊಗ್ರ ಕೊರಗ, ಸಂಜೀವ ಕೊರಗ, ಸುಶೀಲ ನಾಡ, ಗೌರಿ ಕೊರಗ ಮತ್ತಿತರರು ಉಪಸ್ಥಿತರಿದ್ದರು.

See also  ಏಷ್ಯಾಕಪ್ 2022: ಪಾಕಿಸ್ತಾನವನ್ನು 5 ವಿಕೆಟ್ಗಳಿಂದ ಸೋಲಿಸಿದ ಭಾರತ!

ಜಿಲ್ಲಾ ಸಮಗ್ರ ಗಿರಿಜನ ಅಭಿವೃದ್ದಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ದೂದ್‌ಪೀರ್ ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು