News Kannada
Friday, March 24 2023

ಉಡುಪಿ

ಉಡುಪಿ: ಕಾಂಗ್ರೆಸ್ ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳುವ ಪ್ಲ್ಯಾನ್ ಮಾಡಿದೆ – ಅಣ್ಣಾಮಲೈ ವಾಗ್ದಾಳಿ

Annamalai accuses Congress of planning to turn Karnataka into ATMs
Photo Credit : News Kannada

ಉಡುಪಿ: ಕಾಂಗ್ರೆಸ್ ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳುವ ಪ್ಲ್ಯಾನ್ ಮಾಡಿದೆ. ಮುಂದಿನ ಲೋಕಸಭೆ ಚುನಾವಣೆಗೆ ಕರ್ನಾಟಕ ಬಜೆಟ್ ನ ಶೇ. 10 ಬಳಸುವ ಯೋಚನೆ ಮಾಡಿದೆ ಎಂದು ಬಿಜೆಪಿ ರಾಜ್ಯ ಸಹ ಉಸ್ತುವಾರಿ ಕೆ. ಅಣ್ಣಾಮಲೈ ಆರೋಪಿಸಿದರು.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಜಿಲ್ಲಾ ಬಿಜೆಪಿಯ ಸನ್ಮಾನ ಸ್ವೀಕರಿಸಿ ಮಾತನಾಡಿದರು. ದಕ್ಷಿಣ ಭಾರತದಲ್ಲೇ ಕರ್ನಾಟಕ ಅಭಿವೃದ್ಧಿಯಲ್ಲಿ ನಂಬರ್ 1 ಸ್ಥಾನದಲ್ಲಿದೆ. ಕರ್ನಾಟಕದಿಂದ ಹೊರಗೆ ನಿಂತು ನೋಡಿದಾಗ ಅಭಿವೃದ್ಧಿ ತಿಳಿಯುತ್ತದೆ. ಆದರೆ, ಈಗ ನಿದ್ದೆಯಿಂದ ಎದ್ದು ಈಗ ಕಾಂಗ್ರೆಸ್ ಆರೋಪ ಮಾಡುತ್ತಿದೆ. ನಿದ್ದೆ ಮಾಡಿ ಹಲ್ಲುಜ್ಜಲು ಹೋಗುವ ಗ್ಯಾಪಲ್ಲಿ ಕಾಂಗ್ರೆಸ್ ಸದಾ ಆರೋಪ ಮಾಡುತ್ತದೆ ಎಂದು ಟೀಕಿಸಿದರು.

ನಮ್ಮ ಬಳಿ ಅಭಿವೃದ್ಧಿ ಇದೆ- ಡಬಲ್ ಎಂಜಿನ್ ಸರ್ಕಾರ ಇದೆ. ಭಾರತದ ಅಭಿವೃದ್ಧಿ ಜೊತೆ ಕರ್ನಾಟಕ ಜನ ನಿಲ್ಲುತ್ತಾರೆ. ಉಡುಪಿಯಲ್ಲಿ ಐದಕ್ಕೈದು, ರಾಜ್ಯದಲ್ಲಿ 150ಕ್ಕೂ ಅಧಿಕ ಸ್ಥಾನದಲ್ಲಿ ಗೆದ್ದು, ಕರ್ನಾಟಕದಲ್ಲಿ ಮೊದಲ ಬಾರಿ ಪೂರ್ಣ ಬಹುಮತದ ಸರಕಾರ ರಚಿಸಲಿದೆ ಎಂದು ಭವಿಷ್ಯ ನುಡಿದರು.

See also  ಉಡುಪಿ: ಡಿ.3 ಮತ್ತು‌ 4ಕ್ಕೆ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟ- ಸಂತೋಷ್ ಸುವರ್ಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು