News Kannada
Wednesday, March 22 2023

ಉಡುಪಿ

ಉಡುಪಿ ಜಿಲ್ಲೆಯಲ್ಲಿ 41 ಸಮುದಾಯ ಶೌಚಾಲಯ ನಿರ್ಮಾಣ: ಬಯಲು ಶೌಚ ಸಮಸ್ಯೆಗೆ ಮುಕ್ತಿ

Construction of 41 community toilets in Udupi district: Open defecation free, cleanliness priority
Photo Credit : News Kannada

ಉಡುಪಿ: ಯಾವುದೇ ಗ್ರಾಮ ಅಥವಾ ಜಿಲ್ಲೆಯನ್ನು ಬಯಲು ಶೌಚ ಮುಕ್ತಗೊಳಿಸಲು ಕೇವಲ ಮನೆಗಳಷ್ಟೇ ಶೌಚಾಲಯ ಹೊಂದಿದ್ದರೆ ಸಾಲದು. ಬದಲಿಗೆ ಆ ಗ್ರಾಮ ಅಥವಾ ಜಿಲ್ಲೆಯಲ್ಲಿ ಹೆಚ್ಚು ಜನ ಸೇರುವ ಸಾರ್ವಜನಿಕ ಸ್ಥಳಗಳಲ್ಲಿಯೂ ಸಮುದಾಯ ಶೌಚಾಲಯದ ವ್ಯವಸ್ಥೆಯಿರಬೇಕು. ಆಗ ಮಾತ್ರ ಸಮುದಾಯದಲ್ಲಿ ಸಂಪೂರ್ಣ ಸ್ವಚ್ಚತೆಯನ್ನು ಕಾಪಾಡಬಹುದಾಗಿದೆ. ಗ್ರಾಮೀಣ ಪ್ರದೇಶದಲ್ಲಿ ರೂಢಿಯಲ್ಲಿರುವ ಬಯಲು ಬಹಿರ್ದೆಸೆ ಪದ್ದತಿಯನ್ನು ಸಂಪೂರ್ಣವಾಗಿ ತೊಲಗಿಸಿ, ಗ್ರಾಮಗಳನ್ನು ಸ್ವಚ್ಚ ಹಾಗೂ ಸುಂದರವನ್ನಾಗಿಸುವ ಮೂಲಕ ಗ್ರಾಮೀಣ ಜನರ ಆರೋಗ್ಯವನ್ನು ಕಾಪಾಡುವ ಸ್ವಚ್ಚ ಭಾರತ್ ಮಿಷನ್ ಯೋಜನೆಯ ಉದ್ದೇಶ ಕೂಡಾ ಇದೆ ಆಗಿದೆ.

ಶೌಚಾಲಯವಿಲ್ಲದೆ ಬಯಲು ಶೌಚಾಲಯಕ್ಕೆ ಹೋಗುವುದರಿಂದ ಯಾವ ದುಷ್ಪರಿಣಾಮಗಳು ಉಂಟಾಗುತ್ತದೆ ಎನ್ನುವ ಬಗ್ಗೆ ಅರಿವು ಇದ್ದರೂ ಸಹ ಕೆಲವೊಂದು ಗ್ರಾಮೀಣ ಭಾಗದಲ್ಲಿ ಇನ್ನೂ ಕೂಡ ಬಯಲೇ ಶೌಚಾಲಯವಾಗಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳಲ್ಲಿ ಶೌಚಾಲಯ ನಿರ್ಮಿಸಿಕೊಂಡು ಬಯಲು ಬಹಿರ್ದೆಸೆಗೆ ವಿದಾಯ ಹೇಳುವ ಮೂಲಕ ಸ್ವಚ್ಛ, ಸುಂದರ ಗ್ರಾಮಗಳನ್ನು ರೂಪಿಸುವಲ್ಲಿ ಪ್ರತಿಯೊಬ್ಬರೂ ತಮ್ಮದೇ ಕೊಡುಗೆ ನೀಡುತ್ತಿದ್ದಾರೆ. ಇದೀಗ ಒಂದು ಹೆಜ್ಜೆ ಮುಂದುವರೆದು ಈ ಯೋಜನೆಯ ಲಾಭ ಪಡೆದು , ರಾಜ್ಯಾದ್ಯಂತ ಅವಶ್ಯಕತೆ ಇರುವ ಕಡೆ ಅಂದರೆ ಹೆಚ್ಚಾಗಿ ಜನ ಸೇರುವ ಕಡೆ, ಮಾರುಕಟ್ಟೆ, ಬಸ್ ಸ್ಟ್ಯಾಂಡ್, ಹಾಗೂ ದೇವಸ್ಥಾನದಂತಹ ಸ್ಥಳಗಳಲ್ಲಿ ಸಮುದಾಯ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ.

ಉಡುಪಿ ಜಿಲ್ಲೆಯನ್ನು ಈಗಾಗಲೇ ಬಯಲು ಬಹಿರ್ದೆಸೆ ಮುಕ್ತ ಆಗಿರುವುದಾಗಿ ಘೋಷಣೆ ಮಾಡಲಾಗಿರುತ್ತದೆ. ಬಹುತೇಕ ಗ್ರಾಮೀಣ ಕುಟುಂಬಗಳಿಗೆ ವೈಯಕ್ತಿಕ ಗೃಹ ಶೌಚಾಲಯ ಸೌಲಭ್ಯವನ್ನು ಸ್ವಚ್ಚ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ನಿರ್ಮಿಸಿಕೊಡಲಾಗಿದೆ. ಗೃಹ ಶೌಚಾಲಯ ನಿರ್ಮಾಣಕ್ಕೆ ಸ್ಥಳದ ಅಭಾವಿರುವ ಕುಟುಂಬಗಳಿಗೆ ಹಾಗೂ ಹೆಚ್ಚು ಜನಸಂದಣೆ ಸೇರುವ ಸ್ಥಳಗಳು, ಸಂತೆ, ಜಾತೆ ನಡೆಯುವ ಸ್ಥಳಗಳು , ಮಾರುಕಟ್ಟೆ, ಬಸ್ ನಿಲ್ದಾಣ ಹಾಗೂ ಇತರೆ ಸ್ಥಳಗಳಲ್ಲಿ ನಿಯಮಿತವಾಗಿ ಸೇರುವ ಜನಸಂದಣಿ, ವಲಸೆ ಹಾಗೂ ಇತರೆ ಕಾರಣಗಳಿಂದ ಉಂಟಾಗುವ ಜನಸಂದಣಿ, ಹಾಗೂ ಇತರೆ ಜನನಿಬಿಡ ಪ್ರದೇಶಗಳಲ್ಲಿ ಶೌಚಾಲಯದ ಅಗತ್ಯತೆ ಇದ್ದು, ಇದಕ್ಕಾಗಿ ಜಿಲ್ಲೆಯಲ್ಲಿ ಸ್ವಚ್ಚ ಭಾರತ್ ಮಿಷನ್(ಗ್ರಾ) ಯೋಜನೆಯಡಿ ಇಂತಹ ಪ್ರದೇಶಗಳಲ್ಲಿ ಸಮುದಾಯ ಶೌಚಾಲಯಗಳನ್ನು ನಿರ್ಮಿಸಲಾಗಿದೆ.

ಉಡುಪಿ ಜಿಲ್ಲಾ ಪಂಚಾಯತ್ ಉಡುಪಿ ಸ್ವಚ್ಚ ಭಾರತ್ ಮಿಷನ್ (ಗ್ರಾ) ಉಡುಪಿ ಜಿಲ್ಲೆಯಲ್ಲಿ ಇದುವರೆಗೂ ರೂ.123 ಲಕ್ಷ ಅನುದಾನದಲ್ಲಿ 41 ಸಮುದಾಯ ಶೌಚಾಲಯವನ್ನು ನಿರ್ಮಿಣ ಕಾರ್ಯ ಕೈಗೊಂಡಿದ್ದು,38 ಕಾಮಗಾರಿಗಳು ಮುಕ್ತಾಯಗೊಂಡು ಬಳಕೆಗೆ ಸಿದ್ದವಾಗಿದ್ದು , ಇನ್ನೂ 3 ಕಾಮಗಾರಿಗಳು ಮುಕ್ತಾಯದ ಹಂತದಲ್ಲಿವೆ. ಸಮುದಾಯ ಶೌಚಾಲಯ ನಿರ್ಮಾಣ ಮಾಡಲು ಸ್ವಚ್ಚ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಪ್ರತೀ ಶೌಚಾಲಯಕ್ಕೆ 3 ಲಕ್ಷ ರೂ ಅನುದಾನ ನೀಡಲಾಗುತ್ತದೆ. ಸಮುದಾಯ ಶೌಚಾಲಯ ನಿರ್ಮಾಣ ಮಾಡಲು ಸೂಕ್ತ ಜಾಗ ಲಭ್ಯವಿರಬೇಕು ಹಾಗೂ ಜಾಗ ಪಂಚಾಯತ್ ನ ಹೆಸರಲ್ಲಿರತಕ್ಕದ್ದು, ಒಂದು ವೇಳೆ ಖಾಸಗಿ ಒಡೆತನದ ಜಾಗವಾಗಿದ್ದರೆ, ಖಾಸಗಿ ಒಡೆತನದವರ ಒಪ್ಪಿಗೆ ಪತ್ರ ಬೇಕಾಗುತ್ತದೆ. ಶೌಚಾಲಯದ ಸ್ವಚ್ಚತೆಯ ಜವಾಬ್ದಾರಿಯನ್ನು ನಿರ್ಮಿಸಿಕೊಂಡವರೇ ಮಾಡಿಕೊಳ್ಳುವ ದೃಡೀಕರಣ ಪತ್ರವನ್ನು ಜಿಲ್ಲಾ ಪಂಚಾಯತ್ ನಿಂದ ಪಡೆಯಲಾಗಿದೆ.

See also  ಕುಂದಾಪುರ: ಅಕ್ರಮ ಮರಳು ತೆಗೆಯುವಿಕೆ - ಪರವಾನಗಿ ಪಡೆಯಲು ದೂರುದಾರರ ಸಹಿಯನ್ನು ನಕಲಿ

ಜಿಲ್ಲೆಯಲ್ಲಿ ಈ ಯೋಜನೆಯಡಿ ಈಗಾಗಲೇ ಪ್ರಸ್ತಾವನೆಗಳು ಸಲ್ಲಿಕೆಯಾಗಿರುವ, ಉಡುಪಿ ತಾಲೂಕು-3, ಬೈಂದೂರು-8, ಕಾಪು-5, ಕುಂದಾಪುರ -10, ಬ್ರಹ್ಮಾವರ-3,ಕಾರ್ಕಳ-8, ಹೆಬ್ರಿ ಯಲ್ಲಿ 4 ಸಮುದಾಯ ಶೌಚಾಲಯ ನಿರ್ಮಾಣ ಕೈಗೊಳ್ಳಲಾಗಿದೆ. ಇಲ್ಲಿನ ಪ್ರಮುಖ ಜನಸಂದಣಿ ಸ್ಥಳಗಳಲ್ಲಿ , ಸಮುದಾಯ ಶೌಚಾಲಯಗಳ ನಿರ್ಮಾಣ ಕಾರ್ಯ ಸಂಪೂರ್ಣಗೊಂಡಿದ್ದು, ಅವುಗಳ ಸಮರ್ಪಕ ಬಳಕೆ ಮತ್ತು ಸೂಕ್ತ ನಿರ್ವಹಣೆಯೂ ಆಗುತ್ತಿದೆ. ಪ್ರತಿ ಸಮುದಾಯ ಶೌಚಾಲಯ ನಿರ್ಮಾಣಕ್ಕೆ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿಯಲ್ಲಿ 2.10 ಲಕ್ಷ ಹಾಗೂ ಉಳಿದ ಮೊತ್ತ 90,000.00 ಗಳನ್ನು ಸಂಬಂದಪಟ್ಟ ಪಂಚಾಯತ್ ಗಳ 15 ನೇ ಹಣಕಾಸು ಯೋಜನೆಯಡಿ ಭರಿಸಲಾಗುತ್ತಿದೆ.

ಗೃಹ ಶೌಚಾಲಯ ನಿರ್ಮಾಣ ಮತ್ತು ಬಳಕೆಯ ಜೊತೆಗೆ ಸಮುದಾಯ ಶೌಚಾಲಯಗಳ ನಿರ್ಮಾಣ ಮತ್ತು ಬಳಕೆಯಿಂದ ಸಂಪೂರ್ಣ ಬಯಲು ಬಹಿರ್ದೆಸೆ ಮುಕ್ತ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಅಗತ್ಯವಿರುವೆಡೆಗಳಲ್ಲಿ ಸಮುದಾಯ ಶೌಚಾಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಈ ಶೌಚಾಲಯ ನಿರ್ಮಾಣಕ್ಕೆ ಇಷ್ಟೇ ಸಂಖ್ಯೆಯ ಗುರಿಗಳು ಇಲ್ಲವಾಗಿದ್ದು, ಎಷ್ಟೇ ಪ್ರಸ್ತಾವನೆಗಳು ಸಲ್ಲಿಕೆಯಾದರೂ, ಪರಿಶೀಲಿಸಿ ಅನುದಾನ ಬಿಡುಗಡೆ ಮಾಡಲಾಗುವುದು. ಇದರಿಂದ ಹೆಚ್ಚು ಜನಸಂದಣಿ ಸೇರುವ ಈ ಜಾಗದಲ್ಲಿ ಶೌಚಾಲಯದ ಸಮಸ್ಯೆಗೆ ಸೂಕ್ತ ಪರಿಹಾರ ದೊರೆಯುವ ಜೊತೆಗೆ ಪರಿಸರದ ಸ್ವಚ್ಚತೆಯೂ ಸಾಧ್ಯವಾಗಲಿದೆ ಎಂದು ಜಿಪಂ ಸಿಇಒ ಪ್ರಸನ್ನ ಹೆಚ್ ಅಭಿಪ್ರಾಯ ಪಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು