ಉಡುಪಿ: ಉಡುಪಿ ನಗರಸಭೆಯ ವತಿಯಿಂದ ನಗರಸಭೆಯ 2021-22 ನೇ ಸಾಲಿನ 15ನೇ ಹಣಕಾಸಿನ ಆಯೋಗದಡಿ 2.65 ಕೋಟಿ ರೂ. ವೆಚ್ಚದಲ್ಲಿ ಅಲೆವೂರಿನ ಕರ್ವಾಲಿನಲ್ಲಿ ನಿರ್ಮಿಸಲಾದ 10 ಟನ್ ಸಾಮರ್ಥ್ಯದ ಒಣತಾಜ್ಯ ನಿರ್ವಹಣಾ ಘಟಕವನ್ನು ಇಂದು ಉದ್ಘಾಟನೆಗೊಂಡಿತು.
ಶಾಸಕ ಕೆ. ರಘುಪತಿ ಭಟ್ ಅವರು ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ನಗರ ಸಭೆಯ ಪೌರಾಯುಕ್ತ ಉದಯ್ ಶೆಟ್ಟಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಯಶ್ವಂತ್ ಪ್ರಭು, ಪರಿಸರ ಇಲಾಖೆಯ ಅಧಿಕಾರಿ ಸ್ನೇಹಾ ಮತ್ತು ನಗರ ಸಭಾ ಸದಸ್ಯರು ಉಪಸ್ಥಿತರಿದ್ದರು.