ಉಡುಪಿ: ಬಂಟ ಸಮುದಾಯದ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇನೆ ಎಂದು ಸಮಾಜ ಕಲ್ಯಾಣ ಅಭಿವೃದ್ದಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಉಡುಪಿಯಲ್ಲಿ ಬಂಟ ಸಮುದಾಯದ ನಿಗಮ ರಚನೆಯ ಬೇಡಿಕೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಅನೇಕರು ನಿಗಮಗಳನ್ನು ಕೇಳಿದ್ದಾರೆ. ನಾರಾಯಣಗುರು ನಿಗಮ, ಬಂಜಾರ ನಿಗಮ, ಗಾಣಿಗ ನಿಗಮಗಳನ್ನು ನೀಡಲಾಗಿದೆ. ಈ ಬಗ್ಗೆ ಸಿಎಂ ಗಮನಕ್ಕೆ ತರಲಾಗುವುದು ಎಂದರು.
ವಿದೇಶದಲ್ಲಿ ರಾಹುಲ್ ಗಾಂಧಿ ಭಾರತದ ಬಗ್ಗೆ ಲಘು ಮಾತು ವಿಚಾರಕ್ಕೆ ಪ್ರತಿಕಿಯಿಸಿದ ಸಚಿವ ಕೋಟ ಅವರು, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ವಿದೇಶದ ಯುನಿವರ್ಸಿಟಿಯಲ್ಲಿ ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಅಂತಾರೆ. ಬೇರೆ ದೇಶಗಳು ಮಧ್ಯಪ್ರವೇಶಿಸಬೇಕು ಎನ್ನುವ ಮಟ್ಟಕ್ಕೆ ಮಾತನಾಡಿದ್ದಾರೆ. ಕಾಂಗ್ರೆಸ್‌ನ ಹಿರಿಯ ತಲೆಮಾರು ಹೇಗೆ ಸಮರ್ಥಿಸುತ್ತೀರಿ? ಈ ಬಗ್ಗೆ ಕಾಂಗ್ರೆಸ್ ನಾಯಕರ ಉತ್ತರ ಏನು ಎಂದು ಪ್ರಶ್ನಿಸಿದರು.