ಕುಂದಾಪುರ: ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾದ ಘಟನೆ ಕುಂದಾಪುರದ ಸಂತೆ ಮಾರ್ಕೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಬಸ್ ಕುಂದಾಪುರದ ಬಸ್ರೂರು ಮೂರುಕೈ ಬಳಿಯ ಕೆಎಸ್ಸಾರ್ಟಿಸಿ ಡಿಪ್ಪೋದಿಂದ ಹೊರಟು ಬಸ್ ನಿಲ್ದಾಣಕ್ಕೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಸಂತೆ ಮಾರುಕಟ್ಟೆ ಎದುರಿನ ಡಿವೈಡರ್‌ನಲ್ಲಿ ಯೂ ಟರ್ನ್ ತೆಗೆದುಕೊಳ್ಳುವಾಗ ಉಡುಪಿ ಕಡೆಯಿಂದ ಬೈಂದೂರಿನತ್ತ ಸಾಗುತ್ತಿದ್ದ ಲಾರಿಯೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿದ್ದು ಬಸ್ ಚಾಲಕ ಭಾಸ್ಕರ್ ಎನ್ ನಾಯ್ ಎಂಬವರು ಗಾಯಗೊಂಡಿದ್ದಾರೆ.
ಲಾರಿ ಚಾಲಕನ ನಿರ್ಲಕ್ಷ್ಯ ಹಾಗೂ ಅತಿ ವೇಗದ ಚಾಲನೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಆರೋಪಿ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.