ಉಡುಪಿ: ಗೃಹ ಜ್ಯೋತಿ ಹಾಗೂ ಗೃಹ ಲಕ್ಷ್ಮೀ ಯೋಜನೆಯ ಮೂಲಕ ಪ್ರತಿಮನೆಗೆ ವಾರ್ಷಿಕ 55, 200ರೂ. ನೀಡಲಾಗುವುದು. ನಮ್ಮ ಸರಕಾರ ಐದು ವರ್ಷ ಅಧಿಕಾರದಲ್ಲಿ ಪ್ರತಿಮನೆಗೆ ಈ ಯೋಜನೆ ಮೂಲಕ ಒಟ್ಟು 2.76ಲಕ್ಷ ರೂ. ಸಹಾಯಧನ ದೊರೆಯಲಿದೆ. ಈ ಯೋಜನೆಗಳಿಗೆ ಈಗಿನ ಬಿಜೆಪಿ ಸರಕಾರದ ಶೇ.40 ಕಮಿಷನ್ ಹಣದ ಸೋರಿಕೆಯನ್ನು ತಡೆದು ಬಳಸಿಕೊಳ್ಳಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದ್ದಾರೆ.
ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಡುಪಿ ಸಂತೆಕಟ್ಟೆಯಲ್ಲಿ ನಡೆದ ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಾಜಿ ಸಚಿವ ಬಿ.ಎಲ್.ಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ವೇದಿಕೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಮುಖಂಡರಾದ ಸರಳ ಕಾಂಚನ್, ರಾಜು ಪೂಜಾರಿ, ದಿನಕರ ಹೇರೂರು, ಪ್ರಸಾದ್ ರಾಜ್ ಕಾಂಚನ್, ವರೋನಿಕಾ ಕರ್ನೆಲಿಯೋ, ರಮೇಶ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ, ದಿವಾಕರ್ ಕುಂದರ್, ವಿಶ್ವಾಸ್ ಅಮೀನ್, ಪ್ರಖ್ಯಾತ್ ಶೆಟ್ಟಿ, ಹರೀಶ್ ಕಿಣಿ, ಮೀನಾಕ್ಷಿ ಮಾಧವ ಬನ್ನಂಜೆ, ಅಣ್ಣಯ್ಯ ಶೇರಿಗಾರ್ ಮೊದಲಾದವರು ಉಪಸ್ಥಿತರಿದ್ದರು.