ಉಡುಪಿ: ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಸಿಪಿಐಎಂ ಉಡುಪಿ ವಲಯ ಸಮಿತಿ ನೇತೃತ್ವದಲ್ಲಿ ಅಜ್ಹರಕಾಡಿನ ಹುತಾತ್ಮ ಸ್ಮಾರಕ ಬಳಿ ಇಂದು ಕಟ್ಟಿಗೆ ಹೊತ್ತಿಸಿ ಅಡುಗೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ದ ಘೋಷಣೆ ಕೂಗಿದರು. ಅನಿಲ, ಪೆಟ್ರೋಲ್, ಡಿಸೇಲ್ ಹಾಗೂ ಅಗತ್ಯ ವಸ್ತುಗಳ ಬೆಲೆಯನ್ನು ಕಡಿಮೆ ಮಾಡಬೇಕೆಂದು ಒತ್ತಾಯಿಸಿದರು.
ಸಿಪಿಐಎಮ್ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಸಮಿತಿ ಸದಸ್ಯ ಕವಿರಾಜ್ ಎಸ್, ಉಡುಪಿ ವಲಯ ಸಮಿತಿ ಕಾರ್ಯದರ್ಶಿ ಶಶಿಧರ್ ಗೊಲ್ಲ, ಸಮಿತಿ ಸದಸ್ಯರಾದ ನಳಿನಿ, ವಿಶ್ವನಾಥ. ಕೆ, ಸಿಐಟಿಯು ಉಡುಪಿ ಜಿಲ್ಲಾ ಅಧ್ಯಕ್ಷ ಕೆ.ಶಂಕರ್, ಉಡುಪಿ ಜಿಲ್ಲಾ ಕಟ್ಟಡ ಸಂಘದ ಮುಖಂಡರಾದ ಸುಭಾಷ್ ನಾಯಕ್, ಗಣೇಶ ನಾಯಕ್, ವಾಮನ ಪೂಜಾರಿ,ಹಾಗೂ ಸಿಐಟಿಯು ಜಿಲ್ಲಾ ಮುಖಂಡರಾದ ಉಮೇಶ್, ವಿದ್ಯಾರಾಜ್,ಪ್ರಭಾಕರ್, ಮುರಳಿ ,ಸೈಯಾದ್ ಉಪಸ್ಥಿತರಿದ್ದರು