News Kannada
Tuesday, June 06 2023
ಉಡುಪಿ

ಉಡುಪಿ: ಬಾಳೆಬರೆ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧ ವಿಸ್ತರಣೆ – ಜಿಲ್ಲಾಧಿಕಾರಿ

Ban on vehicular movement at Balebare Ghat extended: Deputy Commissioner
Photo Credit : News Kannada

ಉಡುಪಿ: ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್‌ ನಲ್ಲಿ ಕಾಂಕ್ರೀಟ್‌ ಪೇವ್‌ ಮೆಂಟ್‌ ಕಾಮಗಾರಿಯಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ಬಾಳೆಬರೆ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ಇದ್ದ ನಿಷೇಧವನ್ನು 10 ದಿನಗಳ ಕಾಲ ಹೆಚ್ಚವರಿಯಾಗಿ ವಿಸ್ತರಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಮೊದಲು ಎಪ್ರಿಲ್ 5 ರ ವರೆಗೆ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು. ಇದೀಗ ಕಾಮಗಾರಿ ವಿಳಂವಾಗಿರುವ ಕಾರಣ ಎಪ್ರಿಲ್ 15 ರವರೆಗೆ ನಿಷೇಧ ಮುಂದುವರೆಸಲಾಗಿದ್ದು, ವಾಹನ ಸವಾರರು ಬದಲಿ ರಸ್ತೆಯಲ್ಲಿ ಸಂಚಾರ ನಡೆಸಲು ಆದೇಶಿಸಲಾಗಿದೆ.

ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆಗೆ ಸಂಚರಿಸುವ ಲಘು ವಾಹನಗಳು ತೀರ್ಥಹಳ್ಳಿ – ಹಾಲಾಡಿ – ಬಸ್ರೂರು – ಕುಂದಾಪುರ, ಭಾರೀ ವಾಹನಗಳು ತೀರ್ಥಹಳ್ಳಿ- ಹೆಬ್ರಿ – ಉಡುಪಿ – ಕುಂದಾಪುರ ಮೂಲಕ ಸಂಚರಿಸಲು ಸೂಚಿಸಲಾಗಿದೆ. ತೀರ್ಥಹಳ್ಳಿ – ಯಡೂರು – ಹುಲಿಕಲ್ – ಕುಂದಾಪುರ ಕಡೆಗೆ ಹೋಗುವ ವಾಹನಗಳು ತೀರ್ಥಹಳ್ಳಿ – ಯಡೂರು – ಮಾಸ್ತಿಕಟ್ಟೆ- ನಗರ – ಕೊಲ್ಲೂರು –ಕುಂದಾಪುರ ಮೂಲ ಸಂಚರಿಸಬೇಕು. ಹೊಸನಗರ – ನಗರ – ಕೊಲ್ಲೂರು – ಕುಂದಾಪುರ ರಸ್ತೆಯಲ್ಲಿ ಭಾರಿ ಸರಕು ವಾಹನಗಳಾದ ಮಲ್ಟಿ ಆಕ್ಸೆಲ್ ಹೊರತುಪಡಿಸಿ ಲಘು ಸರಕು ವಾಹನಗಳು ಮಾತ್ರ ಸಂಚರಿಸಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

See also  ಮಂಗಳೂರು: ಪೋಕ್ಸೊ ಪ್ರಕರಣದಲ್ಲಿ ನಿರಪರಾಧಿಯನ್ನು ಬಂಧಿಸಿದ್ದಕ್ಕೆ ಪೊಲೀಸರಿಗೆ 5 ಲಕ್ಷ ರೂಪಾಯಿ ದಂಡ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು