ಕುಂದಾಪುರ: ಬೈಂದೂರು ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸ್ಪರ್ಧೆ ಮಾಡಲಿರುವ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಮಂಗಳವಾರ ಬೈಂದೂರು ಕಚೇರಿಯಲ್ಲಿ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಕೆ ಮಾಡಿದರು.ಈ ಸಂದರ್ಭದಲ್ಲಿ ಅವರ ಬೆಂಬಲಿಗರು ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಕೆ ಮಾಡುವ ಮುನ್ನ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ತ್ರಾಸಿಯಿಂದ ಬೈಂದೂರು ಯಡ್ತರೆ ತನಕ ಬೃಹತ್ ಬೈಕ್ ರ‍್ಯಾಲಿ ಪಾಲ್ಗೊಂಡು ನಂತರ ಬೈಂದೂರು ಯಡ್ತರೆಯಲ್ಲಿ ಬಹಿರಂಗ ಸಭೆಯಲ್ಲಿ ಭಾಗವಹಿಸಿದ ಅವರು ಯಡ್ತರೆ ಯಿಂದ ಬೈಂದೂರು ತಾಲೂಕು ಕಚೇರಿ ವರೆಗೆ ಕಾಲ್ನಡಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು.