ಕುಂದಾಪುರ: ಪಕ್ಷದಲ್ಲಿ ಕಾರ್ಯಕರ್ತನಾಗಿ ಕೆಲಸ ಮಾಡಿರುವುದೇ ನನಗಿರುವ ಹಿನ್ನೆಲೆ. ಪಕ್ಷದ ಬೆಳವಣಿಗೆಗೆ ಕಾರ್ಯಕರ್ತರ ಕೊಡುಗೆ ದೊಡ್ಡದ್ದು.ಕಾರ್ಯಕರ್ತರು ಕಟ್ಟಿದ ಪಕ್ಷದಲ್ಲಿ ಕಾರ್ಯಕರ್ತನಿಗೆ ಟಿಕೆಟ್ ನೀಡುವ ಮುಖೇನ ಬಿಜೆಪಿ ಕಾರ್ಯಕರ್ತರ ಪಕ್ಷ ಎಂದು ಸಾಬೀತು ಪಡಿಸಿದೆ ಎಂದು ಬೈಂದೂರು ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಹೇಳಿದರು.
ಕುಂದಾಪುರ ತಾಲೂಕಿನ ಬೈಂದೂರು ವಿಧಾನಸಭೆ ಕ್ಷೇತ್ರದ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಮಂಗಳವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯ ಮತ್ತು ಕೇಂದ್ರ ಸರಕಾರದ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ ಜನ ಸಾಮಾನ್ಯರಿಗೆ ಸರಕಾರದ ಬಗ್ಗೆ ವಿಶ್ವಾಸವನ್ನು ತುಂಬಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡಿಗೆ ಯಾವುದೇ ರೀತಿಯ ಬೆಲೆ ಇಲ್ಲ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರುಗಳು,ಕಾರ್ಯಕರ್ತರು ಉಪಸ್ಥಿತರಿದ್ದರು.