News Kannada
Friday, February 23 2024
ಉಡುಪಿ

ಆರಾಧನೆ ಜೊತೆಗೆ ದೇವರ ಆಂತರಿಕ‌ ಚಿಂತನೆ ನಡೆಸಬೇಕು: ಪುತ್ತಿಗೆ ಶ್ರೀ

Along with worship, one should have inner thinking of God: Puttige Sri
Photo Credit : News Kannada

ಉಡುಪಿ: ದೇವರ ಆರಾಧನೆ ಮಾಡುವುದರ ಜೊತೆಗೆ ಆಂತರಿಕವಾಗಿಯೂ ಭಗವಂತನ ಚಿಂತನೆ ನಡೆಸಬೇಕು ಎಂದು ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದರು.

ಪರ್ಯಾಯ ಪೂರ್ವಭಾವಿ‌ ಧಾನ್ಯ ಮುಹೂರ್ತ ಅಂಗವಾಗಿ ಉಡುಪಿ ಪುತ್ತಿಗೆ ಮಠದ ಸಭಾಂಗಣದಲ್ಲಿ ಇಂದು ನಡೆದ‌ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ಈ ಬಾರಿಯದ್ದು ವಿಶ್ವ ಗೀತಾ ಪರ್ಯಾಯ ಎಂದು ಘೋಷಿಸಿದ ಶ್ರೀಗಳು, ದೇವರ ಪೂಜೆಯ ಸಂಕಲ್ಪ, ಪೂರ್ಣತೆ ನಡುವೆ ಒಂದೊಂದು ಫಲವಿದೆ. ಪ್ರತಿಯೊಬ್ಬರಿಗೂ‌ ದೇವರ ಪೂಜೆ, ಅನುಗ್ರಹದ ಅಪೇಕ್ಷೆಯಿದ್ದರೂ ಜಗತ್ತಿಗೆ ಭಗವಂತನ ಅನುಗ್ರಹದ ಫಂಡ್ ಬಂದರೆ ಎಲ್ಲವೂ ಸುಲಲಿತ ಎಂದರು.

ಮನುಷ್ಯ ಯತ್ನದ ಜತೆಗೆ ದೇವರ ಅನುಗ್ರಹ ಬೇಕು. ವೈಯಕ್ತಿಕಕ್ಕಿಂತ ಜಗದ ಶ್ರೇಯಸ್ಸಿನ ಪೂಜೆಯೇ ಪರ್ಯಾಯ. ಒಂದು ಕೋಟಿ ಜನರಿಂದ ಭಗವದ್ಗೀತೆ‌ ಬರೆಸುವ‌ ಸಂಕಲ್ಪ ನಮ್ಮದು, ಅದನ್ನು ಈಡೇರಿಸಲು‌ ಶ್ರೀಕೃಷ್ಣನಿದ್ದಾನೆ. ಜಗತ್ತಿನ ಮೂಲೆ ಮೂಲೆಯಲ್ಲೂ ಗೀತಾ ಪ್ರಚಾರವಾಗಿದೆ. ಪರ್ಯಾಯದಲ್ಲಿ‌ ದೇವರ ಸೇವೆ ಜತೆಗೆ ಭಕ್ತರ ಸೇವೆಯ ಅವಕಾಶ ಉಡುಪಿ ಜನರಿಗಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು