ಉಡುಪಿ: ಕುಂಜಿಬೆಟ್ಟುವಿನ ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ ಇಂದು ಮುಂಜಾನೆ ಖಾಸಗಿ ಬಸ್ ಹಾಗೂ ಸಿಮೆಂಟ್ ಮಿಶ್ರಣದ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಬಸ್ ಚಾಲಕ ಮತ್ತು ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಲಾರಿಯಲ್ಲಿದ್ದ ಕಾಂಕ್ರೀಟ್ ರಸ್ತೆಗೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.