ಕುಂದಾಪುರ: ಹೆಮ್ಮಾಡಿ ಸಮೀಪದ ಜಾಲಾಡಿಯಲ್ಲಿ ಕಾರೊಂದು ಡಿವೈಡರ್ ದಾಟಿ ಪಲ್ಟಿಯಾಗಿ ಮತ್ತೊಂದು ಕಡೆಯ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.