News Karnataka Kannada
Friday, April 19 2024
Cricket
ಉಡುಪಿ

ಸಿದ್ದರಾಮಯ್ಯ ವಿರುದ್ದ ಮಾನಹಾನಿ ಹೇಳಿಕೆ, ಹರೀಶ್ ಪೂಂಜಾ ವಿರುದ್ದ ಕಾರ್ಕಳ ಠಾಣೆಯಲ್ಲಿ ದೂರು ದಾಖಲು

Complaint lodged against Harish Poonja at Karkala police station for making defamatory remarks against Siddaramaiah
Photo Credit : News Kannada

ಕಾರ್ಕಳ: ಮೇ.22 ರಂದು ಬೆಳ್ತಂಗಡಿಯಲ್ಲಿ ಬಿಜೆಪಿ ಪಕ್ದದ ವತಿಯಿಂದ ಆಯೋಜಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ , ಸಿದ್ದರಾಮಯ್ಯ 24 ಹಿಂದುಗಳ ಕೊಲೆ ಮಾಡಿಸಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು, ಈ ವಿವಾದಾತ್ಮಕ ಹೇಳಿಕೆಯ ವಿರುದ್ದ ಇಂದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕಾಂಗ್ರೇಸ್ ನಿಯೋಗ ದೂರು ದಾಖಲಿಸಿದೆ.

ಮುಖ್ಯಮಂತ್ರಿಗಳ ವಿರುದ್ದ ಶಾಸಕ ಪೂಂಜಾ ಆಡಿದ ಮಾತುಗಳು ಸತ್ಯಕ್ಕೆ ದೂರವಾಗಿದ್ದು ವೈಯಕ್ತಿಕ ನಿಂದನೆಯಿಂದ ಕೂಡಿದೆ, ಅವರ ಮಾನಹಾನಿ ಮಾಡಿದ ಶಾಸಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾರ್ಕಳ ಕಾಂಗ್ರೆಸ್ ನಿಯೋಗ ಇಂದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಈ ಸಂದರ್ಬದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಪುರಸಭಾ ಸದಸ್ಯ ವಕ್ತಾರ ಶುಭದ ರಾವ್, ಪುರಸಭಾ ಸದಸ್ಯ ಸೊಮನಾಥ್ ನಾಯ್ಕ್,ಮಾಜಿ ಸದಸ್ಯ ವಿವೇಕಾನಂದ ಶೆಣೈ, ನಗರ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಕಾಂತಿ ಶೆಟ್ಟಿ, ಸುನೀಲ್ ಭಂಡಾರಿ, ಬ್ರಯಾನ್ ಪಯಾಸ್ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು